Friday, April 4, 2025
Google search engine

Homeರಾಜ್ಯಸುದ್ದಿಜಾಲಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ: ಮಗು ಸಾವು

ಮಕ್ಕಳಿಗೆ ವಿಷ ಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನ: ಮಗು ಸಾವು

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ ಮಕ್ಕಳಿಗೆ ವಿಷಕುಡಿಸಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಧುವನಹಳ್ಳಿ ಗ್ರಾಮದ ಶೀಲಾ ತನ್ನ ಮಕ್ಕಳು ಯಶ್ವಂತ್ ಮತ್ತು ಸಿಂಧುಗೆ ವಿಷಕುಡಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆರು ವರ್ಷದ ಸಿಂಧು ಮೃತಪಟ್ಟಿದ್ದಾಳೆ. ಮೈಸೂರಿನ ಜೆಎಸ್ ​ಎಸ್​ ಆಸ್ಪತ್ರೆಯಲ್ಲಿ ತಾಯಿ ಶೀಲ ಹಾಗೂ ಮಗು ಯಶವಂತ್ ಗೆ​ ಚಿಕಿತ್ಸೆ ಮುಂದುವರೆದಿದೆ.

ಪತಿ ಪ್ರತಿದಿನ ಕುಡಿದು ಬಂದು ಪತ್ನಿ ಶೀಲ ಜೊತೆಗೆ ಜಗಳವಾಡುತ್ತಿದ್ದ. ಇದರಿಂದ  ಮನನೊಂದ ಶೀಲ ಮಕ್ಕಳಿಗೆ ವಿಷ ಕುಡಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular