Friday, April 18, 2025
Google search engine

Homeಸಿನಿಮಾಸೌಜನ್ಯ ಜೀವನ ಆಧರಿಸಿ ಸಿನಿಮಾ:ಜಿಕೆ ವೆಂಚರ್ಸ್ ನಿ0ದ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಸೌಜನ್ಯ ಜೀವನ ಆಧರಿಸಿ ಸಿನಿಮಾ:ಜಿಕೆ ವೆಂಚರ್ಸ್ ನಿ0ದ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ

ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. ಮರುದಿನ ಅವರ ಶವ ಪತ್ತೆ ಆಯಿತು.
ನೈಜ ಘಟನೆ ಇಟ್ಟುಕೊಂಡು ಅನೇಕ ಸಿನಿಮಾಗಳು ಈಗಾಗಲೇ ಮೂಡಿಬಂದಿವೆ. ಅತ್ಯಾಚಾರಕ್ಕೆ ಒಳಗಾದ ಅನೇಕ ಮಹಿಳೆಯರ ಬಗ್ಗೆಯೂ ಸಿನಿಮಾಗಳು ಆಗಿವೆ. ಈಗ ಧರ್ಮಸ್ಥಳದಲ್ಲಿ ನಡೆದ ಘಟನೆ ಆಧರಿಸಿ ಸ್ಯಾಂಡಲ್​ವುಡ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಇದೇ ಪ್ರಕರಣ ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಈ ವಿಚಾರ ಸಾಕಷ್ಟು ಕುತೂಹಲ ಮೂಡಿಸಿದೆ.

ಏನಿದು ಘಟನೆ?
ಈ ಘಟನೆ ನಡೆದಿದ್ದು 2012ರಲ್ಲಿ. ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಯಿತು. ಅದೇ ದಿನ ರಾತ್ರಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಯಿತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖದಲ್ಲಿ ಅವರ ಶವ ಪತ್ತೆ ಆಯಿತು. ಸೌಜನ್ಯ ಮೇಲೆ ಅತ್ಯಾಚಾರ ಕೂಡ ನಡೆದಿತ್ತು. ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಸಂತೋಷ್ ರಾವ್ ಅವರು ನಿರ್ದೋಷಿ ಎಂದು ಕೋರ್ಟ್ ಇತ್ತೀಚೆಗೆ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ಯಾರಿಗೂ ಶಿಕ್ಷೆ ಆಗಿಲ್ಲ.

ಸಿನಿಮಾ ಟೈಟಲ್ ನೋಂದಣಿ
ಸೌಜನ್ಯ ಅವರ ಜೀವನ ಆಧರಿಸಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ‘ಸ್ಟೋರಿ ಆಫ್ ಸೌಜನ್ಯ’ ಟೈಟಲ್ ನೋಂದಣಿ ಆಗಿದೆ. ಜಿಕೆ ವೆಂಚರ್ಸ್ ಈ ಟೈಟಲ್ ನೋಂದಣಿ ಮಾಡಿಸಿದೆ. ವಿ. ಲವ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಸಾಮಾಜಿಕ ಕಥಾ ಹಂದರ ಹೊಂದಿರಲಿದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ಸಿದ್ಧವಾಗಲಿದೆ.

RELATED ARTICLES
- Advertisment -
Google search engine

Most Popular