Thursday, July 31, 2025
Google search engine

Homeರಾಜ್ಯರಾಜ್ಯದಲ್ಲಿ ರಸಗೊಬ್ಬರ ಕೊರತೆ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ರಾಜ್ಯದಲ್ಲಿ ರಸಗೊಬ್ಬರ ಕೊರತೆ ಕುರಿತು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ ಡಾ.ಕೆ. ಸುಧಾಕರ್

ನವದೆಹಲಿ: ರಾಜ್ಯದಲ್ಲಿ ರಸಗೊಬ್ಬರದ ಕೊರತೆಯುಂಟಾಗಿದ್ದು ರೈತರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಇಂದು ಲೋಕಸಭೆ ಕಲಾಪದಲ್ಲಿ ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಪ್ರಸ್ತಾಪಿಸಿದರು.

ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ರಸಗೊಬ್ಬರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಸಂಸದ ಸುಧಾಕರ್, ಮುಂಗಾರು ಅವಧಿ ಕೃಷಿಗೆ ನಿರ್ಣಾಯಕ. ಈ ವೇಳೆಯಲ್ಲಿ ಭತ್ತ, ಜೋಳ, ದ್ವಿದಳಧಾನ್ಯ, ಸೋಯಾಬಿನ್‌ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬೆಳೆಯುತ್ತಾರೆ.  ಕೇಂದ್ರ ಸರ್ಕಾರವು ಈ ಹಂಗಾಮಿನಲ್ಲಿ 8.13 ಲಕ್ಷ ಟನ್‌ ಯೂರಿಯಾವನ್ನು ರಾಜ್ಯಕ್ಕೆ ಕಳುಹಿಸಿದೆ. ಆದರೆ ಕಾಂಗ್ರೆಸ್‌ ಸರ್ಕಾರದ ಅಸಮರ್ಪಕ ಆಡಳಿತದಿಂದ ರೈತರಿಗೆ ಭಾರಿ ತೊಂದರೆ ಆಗಿದೆ. ಕರ್ನಾಟಕದಲ್ಲಿ ಕಾಳಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

‘ರಾಜ್ಯದಲ್ಲಿ ದಾಸ್ತಾನು ಇದ್ದರೂ ಯೂರಿಯಾ ಹಾಗೂ ಡಿಎಪಿ ಹಂಚಿಕೆ ಮಾಡಿಲ್ಲ. ಈ ಮೂಲಕ ರೈತರಿಗೆ ಅನ್ಯಾಯ ಮಾಡಿದೆ. ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಸಮರ್ಪಕ ರಸಗೊಬ್ಬರ ಪೂರೈಕೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಬೇಕು ಎಂದು ಸಂಸದ ಸುಧಾಕರ್ ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular