Saturday, April 19, 2025
Google search engine

Homeಸ್ಥಳೀಯಸಂಡೂರು ಕ್ಷೇತ್ರದಿಂದ ಸಂಸದ ಇ ತುಕಾರಾಂ ಪತ್ನಿ ಕಣಕ್ಕೆ: ಸಿಎಂ ಸಿದ್ದರಾಮಯ್ಯ

ಸಂಡೂರು ಕ್ಷೇತ್ರದಿಂದ ಸಂಸದ ಇ ತುಕಾರಾಂ ಪತ್ನಿ ಕಣಕ್ಕೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಸಂಡೂರು ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಕೊಡುತ್ತೇವೆ. ಉಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಸ್ವತಂ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು. ಇನ್ನು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರುವ ಬಗ್ಗೆ, ಅವರ ಜೊತೆ ನಾನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಯಲಿದೆ. 3 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಕಣ ಜಿದ್ದಾಜಿದ್ದಿಯಿಂದ ಕೂಡಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಮೂಲಕ ಖಚಿತವಾಗಿದೆ.


RELATED ARTICLES
- Advertisment -
Google search engine

Most Popular