ಮೈಸೂರು: ಮೈಸೂರು-ಕುಶಾಲನಗರ ಹೆದ್ದಾರಿ ವಿಭಾಗದ NH-275 ಯೋಜನೆ ಕಾಮಗಾರಿಯ ಕುರಿತು ಸಂಸದ ಪ್ರತಾಪ್ ಸಿಂಹ ಅವರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ರ್ಟೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸದರಿ ಕಾಮಗಾರಿಯ ಕುರಿತು ಚರ್ಚೆ ನಡೆಸಿದರಲ್ಲದೆ, ಕೆಲವು ಸಲಹೆಗಳನ್ನ ಅಧಿಕಾರಿಗಳಿಗೆ ನೀಡಿದರು.
ಸದರಿ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೈಗೆತ್ತುಕೊಂಡಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆಗೆ ಕಾಮಗಾರಿಯ ಕುರಿತು ಚರ್ಚಿಸಿದ ಪ್ರತಾಪ್ ಸಿಂಹ, ಈ ಯೋಜನೆಯ ಕಾಮಗಾರಿಯನ್ನ ಚುರುಕುಗೊಳಿಸುವ ಕುರಿತು ಸಹ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.