ಬೆಂಗಳೂರು: ರಾಜ್ಯದ ಹಿರಿಯ ರಾಜಕಾರಣಿ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ವಿ ಶ್ರೀನಿವಾಸ್ ಪ್ರಸಾದ್ ತೀವ್ರ ಅನಾರೋಗ್ಯಗೊಂಡಿದ್ದಾರೆ. ೭೬ ವರ್ಷದ ವಿ. ಶ್ರೀನಿವಾಸ್ ಪ್ರಸಾದ್ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ.
ಇಂದು ಶನಿವಾರ ಅವರ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶ್ರೀನಿವಾಸ್ ಪ್ರಸಾದ್‌ರನ್ನು ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಗಂಭೀರವಾಗಿದೆ ಅಂತ ಹೇಳಲಾಗುತ್ತಿದೆ.
ಚಾಮರಾಜನಗರ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ. ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಪ್ರಸಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಹೀಗಾಗಿ ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ.