ಬೆಂಗಳೂರು: ಮುಡಾ ಪ್ರಕರಣ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಡಿ ನೋಟಿಸ್ ರಾಜಕೀಯ ಪ್ರೇರಿತವಲ್ಲದೇ ಇನ್ನೇನು ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದು ಕಿಡಿಕಾರಿದರು.
ನ್ಯಾಯ ದೊರೆಯುವ ಭರವಸೆ: ಪ್ರಕರಣವನ್ನು ಸಿಬಿಐ ಗೆ ವಹಿಸಬಹುದೆಂಬ ಆತಂಕವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ ನನಗೇಕೆ ಆತಂಕವಾಗಬೇಕು. ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನಮಗಿದೆ ಎಂದರು.
ಇ.ಡಿ ನೋಟೀಸಿಗೆ ಹೈ ಕೋರ್ಟ್ ತಡೆಯಾಜ್ಞೆ: ಈ ಕುರಿತು ಮಾಧ್ಯಮಕ್ಕೆ ಪ್ರತಿಕ್ರಯಿಸಿದ ಅವರು,ಇ. ಡಿ ನೋಟೀಸು ಜಾರಿ ಮಾಡಿದ್ದು, ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ತನಿಖೆ ನಡೆಯುತ್ತಿದ್ದು, ಸಿಬಿಐ ಗೆ ಪ್ರಕರಣವನ್ನು ವಹಿಸುವ ಬಗ್ಗೆ ಚರ್ಚೆ ನಡೆಯುತ್ತಿದ್ದು ವಾದ ನಡೆಯುವ ಹಂತದಲ್ಲಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ ಎಂದರು