Saturday, April 19, 2025
Google search engine

Homeರಾಜ್ಯಮುಡಾ ಅಕ್ರಮ: ಅರಿಶಿನ, ಕುಂಕುಮ ರೀತಿಯಲ್ಲಿ ಬಾಮೈದ ನನ್ನ ಹೆಂಡತಿಗೆ ಗಿಫ್ಟ್ ನೀಡಿದ್ದ : ಸಿಎಂ...

ಮುಡಾ ಅಕ್ರಮ: ಅರಿಶಿನ, ಕುಂಕುಮ ರೀತಿಯಲ್ಲಿ ಬಾಮೈದ ನನ್ನ ಹೆಂಡತಿಗೆ ಗಿಫ್ಟ್ ನೀಡಿದ್ದ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಅಲ್ಲದೆ ಸಿಎಂ ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಇದು ಬಿಜೆಪಿಯವರ ಕಾಲದಲ್ಲಿ ಆಗಿದ್ದು. ೧ ಎಕರೆ ೧೫ ಗುಂಟೆ ಜಮೀನು ನನ್ನ ಹೆಂಡತಿ ಹೆಸರಿನಲ್ಲಿದೆ. ಈ ಜಮೀನನ್ನು ಬಾಮೈದ ತೆಗೆದುಕೊಂಡು ಅರಿಶಿನ-ಕುಂಕಮ ರೀತಿಯಲ್ಲಿ ಉಡುಗೊರೆಯಾಗಿ ನನ್ನ ಪತ್ನಿಗೆ ಕೊಟ್ಟಿದ್ದಾನೆ. ನಾನು ಅಧಿಕಾರದಲ್ಲಿದ್ದಾಗ ಜಮೀನು ಖರೀದಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ನಮಗೆ ಸೈಟ್ ಕೊಟ್ಟಿರುವಂತದ್ದು. ನಾವು ಕೇಳಿದೆವು, ಈ ರಿಂಗ್ ರೋಡ್ ಪಕ್ಕ ಕೆಸರೆ ಗ್ರಾಮದಲ್ಲಿ ನನ್ನ ಹೆಂಡತಿ ಜಮೀನು ೩ ಎಕರೆ ೧೬ ಗುಂಟೆ ಇದೆ. ಅದನ್ನ ನನ್ನ ಬಾಮೈದ ತೆಗೆದುಕೊಂಡಿದ್ದ ಉಡುಗೊರೆಯಾಗಿ ನನ್ನ ಹೆಂಡತಿಗೆ ಕೊಟ್ಟಿದ್ದ. ನಾನು ಅಧಿಕಾರದಲ್ಲಿ ಇದ್ದಾಗ ಜಮೀನು ಖರೀದಿಸಿಲ್ಲ. ಈ ೫೦:೫೦ ಕೊಡಬೇಕು ಅಂತ ಮಾಡಿದವರು ಯಾರು? ಎಂದು ಪ್ರಶ್ನಿಸಿದರು.

ಕಾನೂನು ಪ್ರಕಾರ ೫೦:೫೦ ಜಮೀನು ಅನುಪಾತದಲ್ಲಿ ಜಮೀನು ಕೊಡುವುದಾಗಿ ಮುಡಾ ಹೇಳಿದೆ. ಆದರೆ ಮುಡಾದವರು ಜಮೀನನ್ನು ಸೈಟ್ ಮಾಡಿ ಹಂಚಿಬಿಟ್ಟರು. ಹಂಚಿದ ಮೇಲೆ ನಮಗೆ ಜಮೀನು ಇಲ್ಲದೆ ಹಾಗೆ ಆಯ್ತು. ಅದಕ್ಕೆ ಮುಡಾದವರು ನಿಮಗೆ ೫೦:೫೦ ಅನುಪಾತದಲ್ಲಿ ಜಮೀನು ಕೊಡುತ್ತೇವೆ ಅಂದರು. ಅದಕ್ಕೆ ಬೇರೆ ಕಡೆ ಜಮೀನು ಕೊಟ್ಟರು, ಇದು ತಪ್ಪಾ? ಕಾನೂನಿನ ಪ್ರಕಾರವೇ ನಮಗೆ ಜಮೀನು ಹಂಚಿದ್ದಾರೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular