Monday, April 21, 2025
Google search engine

Homeಅಪರಾಧಕಾನೂನುಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು ಮೈಸೂರು ಮೂಲದ ಪಿ ಎಸ್ ನಟರಾಜ್ ಎನ್ನುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ನಿಯಮ ಬಾಹಿರವಾಗಿ ಕಾಮಗಾರಿ ನಡೆಸಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ಸಲ್ಲಿಕೆಯಾಗಿದ್ದು, ಮೈಸೂರು ಮೂಲದ ಪಿ ಎಸ್ ನಟರಾಜರಿಂದ ಇದೀಗ ದೂರು ದಾಖಲಾಗಿದೆ. ಕಳೆದ ತಿಂಗಳು ಆಗಸ್ಟ್ ೨೭ರಂದು ನಟರಾಜ್ ದೂರು ನೀಡಿದ್ದರು ಎಂದು ಇದೀಗ ತಡವಾಗಿ ಬೆಳಕಿಗೆ ಬಂದಿದೆ.

ದೂರಿನಲ್ಲಿ ನಿಯಮ ಬಾಹಿರವಾಗಿ ಕಾಮಗಾರಿ ಕೈಗೊಂಡ ಬಗ್ಗೆ ಆರೋಪ ಮಾಡಿ ದೂರು ನೀಡಿದ್ದರು. ವರುಣ ಹಾಗೂ ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿನ ಕಾಮಗಾರಿಯ ಕುರಿತು, ಸುಮಾರು ೩೮೭ ಕೋಟಿಯ ಕಾಮಗಾರಿಗಳು ನಿಯಮಬಾಹಿರ ಆಗಿವೆ. ನಿಯಮಬಾಹಿರವಾಗಿ ಮುಡಾ ಕಾಮಗಾರಿಗಳನ್ನು ಕೈಗೊಂಡಿದೆ.

ಸಿಎಂ ನಿರ್ದೇಶನದ ಅನ್ವಯ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಈ ಬಗ್ಗೆ ಸಿಬಿಐ ತನಿಖೆ ಕೈಗೊಳ್ಳುವಂತೆ ರಾಜ್ಯಪಾಲರಿಗೆ ನಟರಾಜ ಮನವಿ ಮಾಡಿದ್ದಾರೆ. ದೂರು ಸಲ್ಲಿಕೆಯಾದ ಬಳಿಕ ರಾಜ್ಯಪಾಲರು ಈ ಒಂದು ದೂರಿನ ಆಧಾರದ ಮೇಲೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದು ವಿವರ ನೀಡುವಂತೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular