Friday, April 4, 2025
Google search engine

Homeರಾಜಕೀಯಮುಡಾ ಹಗರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆ ಯಶಸ್ವಿ-ಶಾಸಕ ಜಿ.ಟಿ ದೇವೇಗೌಡ

ಮುಡಾ ಹಗರಣ: ಬಿಜೆಪಿ-ಜೆಡಿಎಸ್ ಪಾದಯಾತ್ರೆ ಯಶಸ್ವಿ-ಶಾಸಕ ಜಿ.ಟಿ ದೇವೇಗೌಡ

ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಜೆಡಿಎಸ್-ಬಿಜೆಪಿ ಪಾದಯಾತ್ರೆ ಯಶಸ್ವಿಯಾಗಿದ್ದು ಮುಂದೆಯೂ ಒಂದಾಗಿ ಹೋರಾಟ ಮಾಡುತ್ತೇವೆ ಎಂದರು.

ಶಾಸಕ ಜಿ.ಟಿ ದೇವೇಗೌಡ ಇಂದು ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಬಳಿಕ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಪಾದಯಾತ್ರೆ ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲೂ ಬಿಜೆಪಿ ಜೆಡಿಎಸ್ ಒಂದಾಗಿ ಹೋರಾಟ ಮಾಡುತ್ತೆ. ಮುಡಾ ಪ್ರಕರಣದ ಚೆಂಡು ನ್ಯಾಯಾಲಯದ ಅಂಗಳದಲ್ಲಿದೆ. ಕೋರ್ಟ್ ಯಾವ ನಿರ್ಧಾರ ತೆಗೆದುಕೊಳ್ಳುತ್ತೋ ನೋಡಬೇಕಿದೆ ಎಂದರು.

RELATED ARTICLES
- Advertisment -
Google search engine

Most Popular