Friday, April 18, 2025
Google search engine

Homeಅಪರಾಧಕಾನೂನುಪ್ರಧಾನಿ ನರೇಂದ್ರ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್ : 296 ಪುಟಗಳ ದೂರು...

ಪ್ರಧಾನಿ ನರೇಂದ್ರ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್ : 296 ಪುಟಗಳ ದೂರು ಸಲ್ಲಿಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 296 ಪುಟಗಳ ದಾಖಲೆ ಸಮೇತ ದೂರು ನೀಡಲಾಗಿದೆ. ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.

ಜುಲೈ 19 ರಂದು ಪ್ರಧಾನಿ ಮೋದಿಗೆ ವಕೀಲ ರವಿಕುಮಾರ್ ಅವರು ದೂರು ಸಲ್ಲಿಸಿದ್ದು, ಸುಮಾರು 100 ಕೋಟಿಗೂ ಹೆಚ್ಚು ಆರ್ಥಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರಮೇಲೊಂದರಂತೆ ಅಕ್ರಮಗಳು ಬಯಲಾಗುತ್ತಿದೆ. ಕೇವಲ 3000 ರೂಪಾಯಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಸರ್ಕಾರಕ್ಕೆ 100 ಕೋಟಿಗೂ ಅಧಿಕ ಅಧಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

RELATED ARTICLES
- Advertisment -
Google search engine

Most Popular