ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಏಕಸದಸ್ಯ ಪೀಠಕ್ಕೆ ಅರ್ಜಿಯನ್ನು ಸಿಎಂ ಸಲ್ಲಿಸಿದ್ದರು. ಈ ಅರ್ಜಿಯ ವಾದ ಪ್ರತಿವಾದ ಆಲಿಸಿದ್ದಂತ ನ್ಯಾಯಪೀಠವು ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಈಗ ಈ ತೀರ್ಪು ರದ್ದುಗೊಳಿಸುವಂತೆ ವಿಭಾಗೀಯ ಪೀಠಕ್ಕೆ ಸಿಎಂ ಸಿದ್ಧರಾಮಯ್ಯ ಮೇಲ್ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ತನಿಖೆ ನಡೆಸಲು ರಾಜ್ಯಪಾಲರು ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿದ್ಧರಾಮಯ್ಯ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿತ್ತು. ಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ತೀರ್ಪು ರದ್ದುಗೊಳಿಸುವಂತೆ ವಿಭಾಗೀಯ ನ್ಯಾಯಪೀಠಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ.