ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾನೂನು ಹೋರಾಟ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿಗಳು ತುರ್ತು ವಿಚಾರಣೆಯ ಅಗತ್ಯವಿದೆಯೇ ಎಂದು ಸಿಎಂ ಪರ ವಕೀಲರನ್ನು ಪಶ್ನಿಸಿದ್ದು, ಹೌದು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ ನವೆಂಬರ್ ೨೩ಕ್ಕೆ ವಿಚಾರಣೆ ನಡೆಸಬೇಕೆಂದು ವಕೀಲರು ತಿಳಿಸಿದ್ದಾರೆ. ಈ ಹಿನ್ನಲೆ ವಿಚಾರಣೆಯನ್ನು ನವೆಂಬರ್ ೨೩ಕ್ಕೆ ಹೈಕೋರ್ಟ್ ವಿಭಾಗೀಯಪೀಠ ನಿಗದಿಪಡಿಸಿದೆ ಎಮದು ತಿಳಿದುಬಂದಿದೆ. ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.
ಡಿಸೆಂಬರ್ ೨೪ರ ಒಳಗೆ ತನಿಖಾ ವರದಿ ಸಲ್ಲಿಸಲು ನಿರ್ದೇಶಿಸಿತ್ತು. ಆ ಬಳಿಕ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿ ಅವರು ಆಕ್ಷೇಪಾರ್ಹವಾದ ೧೪ ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದರು. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ ೨೪ರಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದಾದ ಸರಿಸುಮಾರು ಒಂದು ತಿಂಗಳ ಬಳಿಕ ವಕೀಲ ಶತಭಿಷ್ ಶಿವಣ್ಣ ಅವರ ಮೂಲಕ ಮೇಲ್ಮನವಿ ಸಲ್ಲಿಸಲಾಗಿತ್ತು.