ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಂಗಳವಾರ ಮಧ್ಯಾಹ್ನ ೧೨ ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಹೈಕೋರ್ಟ್ ತೀರ್ಪಿನತ್ತ ರಾಜ್ಯದ ಜನರ ಚಿತ್ತ ನೆಟ್ಟಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.
ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತರ ಇಂದು ಮಧ್ಯಾಹ್ನ ೧೨ ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾಗಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳು ಡಿಸಿಪಿ, ಎಸ್ ಪಿಗಳಿಗೆ ಸೂಚನೆ ನೀಡಲಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದ ಬಳಿ ೨ ಕೆಎಸ್ ಆರ್ ಪಿ ತುಕಡಿ ಹಾಗೂ ಒಂದು ಬಿಎಂಟಿಸಿ ಬಸ್ ನಿಯೋಜಿಸಲಾಗಿದೆ.