ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಇಂದು ಶನಿವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಈ ಮೂಲಕ ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ನೀಡಿದ್ದ ದೂರಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ.