Friday, April 18, 2025
Google search engine

Homeರಾಜ್ಯಮೂಡಾ ಹಗರಣ: RTI ಕಾರ್ಯಕರ್ತರಿಗೆ ಕಿರುಕುಳ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಮೂಡಾ ಹಗರಣ: RTI ಕಾರ್ಯಕರ್ತರಿಗೆ ಕಿರುಕುಳ: ಹೆಚ್.ಡಿ.ಕುಮಾರಸ್ವಾಮಿ ಆರೋಪ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬ ಮೈಸೂರಿನ ಮೂಡದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರಿಗೆ ರಾಜ್ಯ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಹಗರಣಗಳನ್ನು ಪ್ರಶ್ನಿಸಿದ ಪ್ರತಿಪಕ್ಷಗಳನ್ನು ವಿಧಾನಮಂಡಲದಲ್ಲಿ ಹತ್ತಿಕ್ಕಲಾಯಿತು ಸತ್ಯಶೋಧನೆಯಲ್ಲಿ ನಿರತರಾದ ಆರ್‌ಟಿಐ ಕಾರ್ಯಕರ್ತರನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ದಮನ ಮಾಡಲಾಗುತ್ತಿದೆ ಎಂದು ಹರಿಹಾಯ್ದಿದ್ದಾರೆ.

ಮುಖ್ಯಮಂತ್ರಿಗಳ ಕುಟುಂಬ ಮೈಸೂರಿನ ಮೂಡಾದಲ್ಲಿ ನಡೆಸಿರುವ ಬದಲಿ ನಿವೇಶನ ಹಗರಣವನ್ನು ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತರನ್ನು ಕಾಂಗ್ರೆಸ್ ಗುರಿ ಮಾಡಿಕೊಂಡಿದೆ. ಆರೋಪಿತ ಸ್ಥಾನದಲ್ಲಿರುವ ಸಿಎಂ ಪರಿವಾರವನ್ನು ರಕ್ಷಿಸುವ ಏಕೈಕ ದುರುದ್ದೇಶದಿಂದ ಕಾಂಗ್ರೆಸ್ಸಿಗರು ಆರ್‌ಟಿಐ ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಕುಂಬಳಕಾಯಿ ಕಳ್ಳ ಹೆಗಲು ಮುಟ್ಟಿ ನೋಡಿಕೊಂಡ ಎಂಬಂತಿದೆ ಈ ನಾಟಕ ಎಂದು ಕೇಂದ್ರ ಸಚಿವರು ಟೀಕಾ ಪ್ರಹಾರ ನಡೆಸಿದ್ದಾರೆ.

ಬದಲಿ ನಿವೇಶನ ಫಲಾನುಭವಿಗಳು ಪರೋಕ್ಷವಾಗಿ ಸತ್ಯ ಒಪ್ಪಿಕೊಂಡಂತೆ ಆಗಿದೆ. ಅಷ್ಟೇ ಅಲ್ಲ ಆರ್‌ಟಿಐ ಕಾರ್ಯಕರ್ತರ ಟಾರ್ಗೆಟ್ ಮಾಡಿದಷ್ಟು ಮೂಡಾದ ಮೂಲೆಮೂಲೆಗಳಲ್ಲಿ ಮುಗ್ಗುತ್ತಿರುವ ಸತ್ಯಗಳು ಮತ್ತಷ್ಟು ಹೊರಬರುತ್ತವೆ. ಇಂಥ ವ್ಯರ್ಥ ಕೆಲಸ ಬಿಟ್ಟು ಮರ್ಯಾದೆಯಿಂದ ಸತ್ಯವನ್ನು ಎದುರಿಸುವುದು ಸಿಎಂ ಆದವರಿಗೆ ಶೋಭೆ ತರುತ್ತದೆ ಎಂದು ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular