Friday, April 11, 2025
Google search engine

Homeರಾಜಕೀಯಮುಡಾ ಹಗರಣ: ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿಯೂ ಬರಬಹುದು- ಜಗದೀಶ್‌ ಶೆಟ್ಟರ್

ಮುಡಾ ಹಗರಣ: ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿಯೂ ಬರಬಹುದು- ಜಗದೀಶ್‌ ಶೆಟ್ಟರ್

ಬೆಳಗಾವಿ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂರಕ್ಕೆ ನೂರರಷ್ಟು ತಪ್ಪಿತಸ್ಥರು. ಮುಂದೆ ಜೈಲಿಗೆ ಹೋಗುವ ಪರಿಸ್ಥಿತಿಯೂ ಬರಬಹುದು ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ನಂತರ ಕಾಂಗ್ರೆಸ್ ನಲ್ಲಿ ಬಹಳಷ್ಟು ಜನ ಶಾಸಕರು ಖುಷಿಯಿಂದ ಇದ್ದಾರೆ ಎಂದರು.

ಮುಡಾ ಹಗರಣದಲ್ಲಿ ತಾವು ತಪ್ಪಿತಸ್ಥರಲ್ಲ ಎನ್ನುವದಾದರೆ ಅದಕ್ಕೆ ಕಾನೂನಾತ್ಮಕ ವಾಗಿ ಹೋರಾಡಲು ಅವಕಾಶವಿದೆ. ಅದನ್ನು ಬಿಟ್ಟು ಸಂವಿಧಾನ ಬದ್ದವಾದ ರಾಜ್ಯಪಾಲರ ಹುದ್ದೆಗೆ ಅವಮಾನ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡಬಾರದು. ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆಗೆ ಅವಕಾಶ ಕೊಟ್ಟಿದ್ದಾರೆ. ರಾಜ್ಯಪಾಲರ ನಿರ್ಧಾರ ಸರಿಯಾಗಿಲ್ಲ ಎಂದು ನ್ಯಾಯಾಲಯಗಳಲ್ಲಿ ಆಕ್ಷೇಪ ಸಲ್ಲಿಸಲು ಅವಕಾಶ ಇದೆ ಎಂದರು.

ಮುಡಾ ಹಗರಣದಲ್ಲಿ ಸಿಎಂ ಸಂಪೂರ್ಣ ತಪ್ಪಿತಸ್ಥರು. ಅವರಿಗೆ ಕಾನೂನಿನ ಮೇಲೆ ಗೌರವ ಇದ್ದರೆ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಜಗದೀಶ್ ಶೆಟ್ಟರ್ ಒತ್ತಾಯಿಸಿದರು.

RELATED ARTICLES
- Advertisment -
Google search engine

Most Popular