Sunday, April 20, 2025
Google search engine

HomeUncategorizedರಾಷ್ಟ್ರೀಯಮುಂಬಯಿ: ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ 5 ಮನೆ ಕುಸಿತ

ಮುಂಬಯಿ: ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ 5 ಮನೆ ಕುಸಿತ

ಮುಂಬಯಿ: ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡ ಪರಿಣಾಮ 5 ಮನೆಗಳು ಕುಸಿತ ಕಂಡಿರುವ ಘಟನೆ ಮುಂಬಯಿಯ ಚೆಂಬೂರ್ ಪ್ರದೇಶದ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನಲ್ಲಿ ಬುಧವಾರ ಮುಂಜಾನೆ(ನ.29 ರಂದು) ನಡೆದಿದೆ.

ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಪರಿಣಾಮವಾಗಿ ಕಟ್ಟಡಗಳು ಕುಸಿದು ಬಿದ್ದಿವೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯಲ್ಲಿ  4 ಮಂದಿಗೆ ಸುಟ್ಟ ಗಾಯಗಳಾಗಿದ್ದು, 11 ಮಂದಿಯನ್ನು ರಕ್ಷಿಸಲಾಗಿದೆ. ಸದ್ಯ‌ ಗಾಯಳುಗಳಿಗೆ ಸೂಕ್ತ‌ ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳ, ಪೊಲೀಸ್, ನಾಗರಿಕ ಸಿಬ್ಬಂದಿ, ಆಂಬ್ಯುಲೆನ್ಸ್ ಸೇವೆ ಮತ್ತು ಇತರ ಸಂಸ್ಥೆಗಳನ್ನು ಜೊತೆಗೂಡಿ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular