Saturday, April 19, 2025
Google search engine

Homeಅಪರಾಧಮುಂಬೈ: ಅಕ್ರಮವಾಗಿ ಸಾಗಿಸುತ್ತಿದ್ದ ₹24 ಕೋಟಿ ಮೌಲ್ಯದ ಡ್ರಗ್ಸ್ ವಶ; ಐವರ ಬಂಧನ

ಮುಂಬೈ: ಅಕ್ರಮವಾಗಿ ಸಾಗಿಸುತ್ತಿದ್ದ ₹24 ಕೋಟಿ ಮೌಲ್ಯದ ಡ್ರಗ್ಸ್ ವಶ; ಐವರ ಬಂಧನ

ಮುಂಬೈ: ಹೈದರಾಬಾದ್‌ನಿಂದ ಮುಂಬೈಗೆ ಬಸ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು ₹24 ಕೋಟಿ ಮೌಲ್ಯದ 16 ಕೆ.ಜಿಯಷ್ಟು ಮೆಫೆಡ್ರೋನ್ ಮಾದಕ ವಸ್ತುವನ್ನು ಮುಂಬೈನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ.

ಪ್ರಕರಣದ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಇಂದು (ಬುಧವಾರ) ತಿಳಿಸಿದ್ದಾರೆ.

ಬಂಧಿತ ಮೂವರು ಆರೋಪಿಗಳಿಂದ ₹1.9 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಇಬ್ಬರು ಶಂಕಿತರ ಮೇಲೆ ಡಿಆರ್‌ಐನ ಮುಂಬೈ ವಲಯ ತಂಡವು ಕಣ್ಗಾವಲು ಇರಿಸಿತು. ಮಂಗಳವಾರ ಮುಂಜಾನೆ ಬಸ್‌ನಲ್ಲಿ ಆರೋಪಿಗಳ ಬಂದ ವೇಳೆ ಬಂಧಿಸಿ ಶೋಧ ನಡೆಸಿತು. ಹುಡುಕಾಟದ ವೇಳೆ ಆರೋಪಿಗಳ ಲಗ್ಗೇಜ್‌ನಲ್ಲಿ 16 ಕೆ.ಜಿ ಮೆಫೆಡ್ರೋನ್ ಪುಡಿಯನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರು ಆರೋಪಿಗಳ ವಿಚಾರಣೆಯ ಬಳಿಕ ಮಧ್ಯವರ್ತಿ ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಗಳ ವಿರುದ್ಧ ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್‌ಡಿಪಿಎಸ್) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

RELATED ARTICLES
- Advertisment -
Google search engine

Most Popular