ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಮಾಜಿ ಶಾಸಕ ಮೊಯ್ದೀನ್ ಬಾವಾರ ಸಹೋದರ ಮುಮ್ತಾಝ್ ಅಲಿ ನಾಪತ್ತೆಯಾದ ಹಿನ್ನೆಲೆಯಲ್ಲಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಕುಟುಂಬಸ್ಥರು ಕಾವೂರು ಠಾಣೆಗೆ ಬ್ಲಾಕ್ ಮೇಲ್ ಬಗ್ಗೆ ದೂರು ನೀಡಿದ್ದರು. ಹನಿಟ್ರ್ಯಾಪ್ ರೀತಿಯಲ್ಲಿ ಆರು ಜನರ ಮೇಲೆ ಅವರು ದೂರು ನೀಡಿದ್ದರು. ಈ ದೂರಿನ ಆಧಾರದಲ್ಲಿ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಇಂದು ತಿಳಿಸಿದ್ದಾರೆ.
ಮಂಗಳೂರಲ್ಲಿ ಮಾತನಾಡಿದ ಅವರು, ಮುಮ್ತಾಝ್ ಅಲಿಯವರು ಬ್ಲ್ಯಾಕ್ ಮೇಲ್ ಮಾಡಿದವ್ರಿಗೆ 50 ಲಕ್ಷ ಹಣ ಕೊಟ್ಟಿದ್ರು. ಹಾಗೆಯೇ 25 ಲಕ್ಷ ಚೆಕ್ ಮೂಲಕ ನೀಡಿದ್ದರು. ವಾಯ್ಸ್ ಕ್ಲಿಪ್ಪಿಂಗ್ ನಲ್ಲಿ ಮುಮ್ತಾಝ್ ಅಲಿ, ಕೆಲವರ ಹೆಸರು ಉಲ್ಲೇಖ ಮಾಡಿದ್ದಾರೆ. ಆರೋಪಿ ಸತ್ತಾರ್ ಹೆಸರು ವಾಯ್ಸ್ ನೋಟ್ ನಲ್ಲಿ ಉಲ್ಲೇಖ ಮಾಡಿದ್ದಾರೆ. ಎ1 ಆರೋಪಿ ಮಹಿಳೆ ರೆಹಮತ್ ಸಂಬಂಧಿ ಅಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು.