ಬೆಳಗಾವಿ: ಶಾಸಕ ಮುನಿರತ್ನ ಅವರೇ ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿ.ಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ದಾಳಿ ನಡೆದಿದೆ ಎಂಬ ಮುನಿರತ್ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ನನಗೆ ಆ ವಿಚಾರ ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ಅವರೇ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ ಎಂದು ತಿಳಿಸಿದ್ದಾರೆ.
ಅವರ ವ್ಯಕ್ತಿತ್ವ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿಯವರಿಗಾಗಲಿ, ಬೇರೆಯವರಿಗಾಗಲಿ ನನ್ನ ವಿರುದ್ಧ ಮಾತಾಡುವ ನೈತಿಕತೆ ಇಲ್ಲ ಎಂದು ಹರಿಹಾಯ್ದಿದ್ದಾರೆ.