Friday, April 18, 2025
Google search engine

Homeಅಪರಾಧಕೋಲ್ಕತ್ತಾ ವೈದ್ಯೆ ಕೊಲೆ: ನನ್ನ ಅಳಿಯನನ್ನು ಗಲ್ಲಿಗೆ ಹಾಕಿ ಎಂದು ಆರೋಪಿಯ ಅತ್ತೆ ಕಿಡಿ

ಕೋಲ್ಕತ್ತಾ ವೈದ್ಯೆ ಕೊಲೆ: ನನ್ನ ಅಳಿಯನನ್ನು ಗಲ್ಲಿಗೆ ಹಾಕಿ ಎಂದು ಆರೋಪಿಯ ಅತ್ತೆ ಕಿಡಿ

ಕೋಲ್ಕತ್ತಾ: ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ತನ್ನ ಅಳಿಯನನ್ನು ಗಲ್ಲಿಗೇರಿಸಿ, ಬೇಕಾದದ್ದನ್ನು ಮಾಡಿ ಎಂದು ಆತನ ಅತ್ತೆ ಕಿಡಿಕಾರಿದ್ದಾರೆ.

ಈ ಕುರಿತು ಆರೋಪಿ ಸಂಜಯ್ ರಾಯ್‌ನ ಅತ್ತೆ ದುರ್ಗಾ ದೇವಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಆರೋಪಿ ಸಂಜಯ್ ಒಬ್ಬನೇ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ. ಈ ಕೃತ್ಯದಲ್ಲಿ ಅವನ ಜೊತೆ ಬೇರೆಯವರು ಇದ್ದಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆರೋಪಿ ಸಂಜಯ್ ನನ್ನ ಮಗಳ ಜೊತೆ ಮದುವೆ ಬಳಿಕ ಆರಂಭದಲ್ಲಿ ೬ ತಿಂಗಳು ಮಾತ್ರ ಆತ ಚೆನ್ನಾಗಿದ್ದ. ಬಳಿಕ ಆಕೆಗೆ ಥಳಿಸುತ್ತಿದ್ದ, ಹಿಂಸೆ ನೀಡುತ್ತಿದ್ದ. ಇದರಿಂದ ಆಕೆ ೩ ತಿಂಗಳ ಗರ್ಭಿಣಿಯಾಗಿದ್ದಾಗ ಆಕೆಗೆ ಗರ್ಭಪಾತವಾಗಿತ್ತು. ಈ ಬಗ್ಗೆ ದೂರು ಕೂಡ ದಾಖಲಿಸಲಾಗಿತ್ತು ಎಂದು ಹೇಳಿದ್ದಾರೆ. ಗರ್ಭಪಾತದ ಬಳಿಕ ನನ್ನ ಮಗಳು ಅನಾರೋಗ್ಯದಿಂದ ಬಳಲುತ್ತಿದ್ದಳು. ಅವಳ ಚಿಕಿತ್ಸೆಯ ಎಲ್ಲಾ ಖರ್ಚುನ್ನು ನಾನು ಭರಿಸಿದ್ದೇನೆ. ಸಂಜಯ್ ಒಳ್ಳೆಯವನಲ್ಲ. ಅವನನ್ನು ಗಲ್ಲಿಗೇರಿಸಿ, ಅವನಿಗೆ ನೀವು ಬೇಕಾದುದನ್ನು ಮಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular