ವ್ಯಕ್ತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದೆ. ದಿನಾಂಕ 09.02.2026 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುಡಿಆರ್ 07/2026, ಕಲಂ 194 (III)(IV) BNSS 2023 ಪ್ರಕರಣಕ್ಕೆ ಸಂಬಂಧಿಸಿದಂತೆ, ಸದ್ರಿ ಕೆ.ಸಿ ವರ್ಗೀಸ್ (73) ಮೃತ ವ್ಯಕ್ತಿಯು ಆತನ ತಲೆಗೆ ಉಂಟಾದ ಗಂಭೀರ ಹಲ್ಲೆಯಿಂದಾಗಿ ಮತ್ತು ದೇಹದ ಇತರ ಭಾಗಗಳಿಗೆ ಆಗಿರುವ ಗಾಯದಿಂದಾಗಿ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿ ಬಂದ ಹಿನ್ನೆಲೆಯಲ್ಲಿ, ಸದ್ರಿ ಯುಡಿಆರ್ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಿನಾಂಕ:13.02.2026 ರಂದು ಅ.ಕ್ರ:21/2026 u/s: 103 (1) BNS-2023 ರಂತೆ ಕೊಲೆ ಪ್ರಕರಣವೆಂದು ಮಾರ್ಪಡಿಸಿ ತನಿಖೆ ನಡೆಸಲಾಗುತ್ತಿದೆ.
ಮೃತ ಕೆ.ಸಿ ವರ್ಗಿಸ್ ತನ್ನ ಹೆಂಡತಿಗೆ ಹೊಡೆದಿದ್ದು ಆಕೆಯು ಮನೆಯಿಂದ ಹೊರಗೆ ಸ್ವಲ್ಪ ದೂರ ಹೋಗಿ ಕುಳಿತಿದ್ದು ಇದನ್ನು ನೋಡಿದ ಒಬ್ಬ ವ್ಯಕ್ತಿ ಈ ಬಗ್ಗೆ ಆಕೆಯ ಮಗ ಕೆ.ವಿ ತೋಮಸ್ ಗೆ ತಿಳಿಸಿದ್ದು ಮಗನು ತನಗೆ ಪರಿಚಯದ ಒಬ್ಬ ಆಟೋ ರಿಕ್ಷಾದವರನ್ನು ಬರಮಾಡಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆಗ ಆಕೆಯ ತಮ್ಮ ರಾಜು ಆಸ್ಪತ್ರೆಗೆ ಬಂದು ನೋಡಿ ತನ್ನ ತಮ್ಮ ಚಾಕೋಚ್ಚನಿಗೆ ಕಾಲ್ ಮಾಡಿ ಅಕ್ಕನಿಗೆ ಅವರ ಗಂಡ ಹೊಡೆದಿರುವುದಾಗಿ ತಿಳಿಸಿ ಬೇಗ ಬಾ ಎಂದು ಕರೆದಿದ್ದಾನೆ. ಹಾಗೆ ಬಂದು ಥಾಮಸ್ ಗೆ ಕರೆ ಮಾಡಿ ವ್ಯಕ್ತಿಗೆ ಹೆದರಿಸಬೇಕೆಂದು ಚರ್ಚೆ ಮಾಡಿ ಥಾಮಸ್ ನನ್ನು ಸ್ವಲ್ಪ ದೂರ ಹೊರಗೆ ಬಿಟ್ಟು ಚಾಕೊಚ್ಚ ಮತ್ತು ರಾಜುರವರು ಒಳಗೆ ಹೋಗಿ ಮೃತ ಕೆ.ಸಿ ವರ್ಗಿಸ್ ರವರಿಗೆ ಕಟ್ಟಿಗೆಯಿಂದ ಹೊಡೆದು ಹೊರಗೆ ಬಂದು ಥಾಮಸ್ ರವರಲ್ಲಿ ಅವರಿಗೆ ಸರಿಯಾಗಿ ಹೊಡೆದಿದ್ದೇವೆ ಅವರನ್ನು ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗು ಎಂದು ಹೇಳಿ ಹೋಗಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಹೋಗಿ ಥಾಮಸ್ ನು ತನ್ನ ತಂದೆಯು ಮಂಚದಿಂದ ಕೆಳಗೆ ಬಿದ್ದು ಅಲ್ಲಿದ್ದ ಕಲ್ಲಿಗೆ ತಲೆ ತಾಗಿ ಪೆಟ್ಟಾಗಿ ಮೃತರಾಗಿರಬಹುದಾಗಿ ಇದೊಂದು ಆಸ್ವಾಭಾವಿಕ ಪ್ರಕರಣವೆಂದು ತಿಳಿಸಿದ್ದಾನೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸರು ಕೂಲಂಕುಶವಾಗಿ ತನಿಖೆ ನಡೆಸಿ ಕೆ.ವಿ. ತೋಮಸ್ @ ವಿಲ್ಸನ್ ನೆಲ್ಯಾಡಿ ಕಡಬ ತಾಲೂಕು(39), ಸಿ.ಟಿ ರಾಜು @ ವರ್ಗೀಸ್ ಅರಸಿನಮಕ್ಕಿ ಬೆಳ್ತಂಗಡಿ ತಾಲೂಕು (59), ಚಾಕೊಚ್ಚ ನೆಲ್ಯಾಡಿ ಕಡಬ ತಾಲೂಕು (51) ಎಂಬವರನ್ನು ದಸ್ತಗಿರಿ ಮಾಡಿ ತನಿಖೆ ಮುಂದುವರಿಸಿದ್ದಾರೆ.



