Friday, April 11, 2025
Google search engine

Homeಅಪರಾಧಕಾನೂನುಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ: 98 ಜನರಿಗೆ ಜೀವಾವಧಿ ಶಿಕ್ಷೆ

ಮರಕುಂಬಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣ: 98 ಜನರಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ. ಈ ಮೂಲಕ ಈ ಪ್ರಕರಣ ದೇಶದ ಇತಿಹಾಸದಲ್ಲೇ ಇಷ್ಟು ಜನರಿಗೆ ಒಂದೇ ಬಾರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು ಮೊದಲು.

ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಮರಕುಂಬಿ ಗ್ರಾಮ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ ಒಳಗಾದಂತ 98 ಅಪರಾಧಿಗಳಿಗೆ ತಲಾ 5 ಸಾವಿರ ದಂಡವನ್ನು ವಿಧಿಸಿದ್ದಾರೆ.

2014ರ ಆಗಸ್ಟ್ 28 ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ ನಡೆದಿದ್ದ ಸವರ್ಣೀಯರು ಮತ್ತು ದಲಿತರ ನಡುವೆ ಗಲಾಟೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 21 ರಂದು 101 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದ್ದರು. ಇಂದು ಅಟ್ರಾಸಿಟಿ, ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಶಿಕ್ಷೆಯ ಪ್ರಮಾಣವನ್ನು ಘೋಷಣೆ ಮಾಡಿದ್ದಾರೆ.

ಪ್ರಕರಣದ ಹಿನ್ನೆಲೆ:

ಗಂಗಾವತಿ ನಗರದಲ್ಲಿ ಪವರ್ ಸಿನಿಮಾ ನೋಡಲು ಮಂಜುನಾಥ ಎಂಬಾತ ತನ್ನ ಸ್ನೇಹಿತರ ಜೊತೆ ಹೋಗಿದ್ದರು. ಮರಕುಂಬಿ ನಿವಾಸಿಯಾಗಿದ್ದ ಮಂಜುನಾಥ ಎಂಬಾತನ ಮೇಲೆ ಹಲ್ಲೆಯಾಗಿತ್ತು. ಬಳಿಕ ತಮ್ಮದೇ ಊರಿನ ದಲಿತರು ಹಲ್ಲೆ ಮಾಡಿಸಿದ್ದಾರೆ ಎಂದು ಮಂಜುನಾಥ ಗ್ರಾಮದ ಜನರಿಗೆ ಹೇಳಿದ್ದ. ಬಳಿಕ ಮಂಜುನಾಥನ ಪರವಾಗಿ ಗ್ರಾಮದ ಜನರು ದಲಿತರ ಮೇಲೆ ಹಲ್ಲೆ ಮಾಡಿದ್ದರು. ಅನೇಕರ ಗುಡಿಸಲುಗಳಿಗೆ ಬೆಂಕಿ ಹಚ್ಚಿ, ಹಲ್ಲೆ ಮಾಡಲಾಗಿತ್ತು. ಈ ಕುರಿತು ಭೀಮೇಶ್ ಎಂಬುವವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಸಿದ್ದರು.

RELATED ARTICLES
- Advertisment -
Google search engine

Most Popular