Wednesday, February 11, 2026
Google search engine

Homeರಾಜಕೀಯಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ ಅಪರಾಧ ನಿಲ್ಲಿಸಿ : ಕೇಂದ್ರಕ್ಕೆ ಮುಸ್ಲಿಂ ನಾಯಕರ ಒತ್ತಾಯ

ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ ಅಪರಾಧ ನಿಲ್ಲಿಸಿ : ಕೇಂದ್ರಕ್ಕೆ ಮುಸ್ಲಿಂ ನಾಯಕರ ಒತ್ತಾಯ

ಬೆಂಗಳೂರು : ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ ಅಪರಾಧಗಳ ಹಿನ್ನೆಲೆಯಲ್ಲಿ, ಮುಸ್ಲಿಂ ನಾಯಕರು ಮತ್ತು ಬುದ್ಧಿಜೀವಿಗಳ ತಂಡ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ ಅಪರಾಧಗಳ ಬಗ್ಗೆ ಮಾಹಿತಿ ನೀಡಿದೆ ಎಂದು ರೋಷನ್ ಬೇಗ್ ತಿಳಿಸಿದರು.

ಈ ಬಗ್ಗೆ ದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡಿದ ಅವರು, ಇಂಡಿಯನ್ ಮುಸ್ಲಿಂ ಫಾರ್ ಪ್ರೋಗ್ರೆಸ್ ಅಂಡ್ ರಿಫಾರ್ಮ್ಸ್ ಸಂಘಟನೆಯ ಮೂಲಕ ದೇಶದ ಪ್ರಮುಖ ಮುಸ್ಲಿಂ ನಾಯಕರ ನಿಯೋಗವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದೇವೆ ಎಂದರು.

ಅಲ್ಲದೆ ಉತ್ತರಾಖಂಡ, ಅಸ್ಸಾಂ ಹಾಗೂ ಉತ್ತರ ಪ್ರದೇಶಗಳಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಅಸ್ಸಾಂ ಮುಖ್ಯಮಂತ್ರಿ ಮುಸ್ಲಿಮರ ವಿರುದ್ಧ ಗನ್ ತೋರಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದು, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲೂ ಇದೇ ರೀತಿಯ ಪರಿಸ್ಥಿತಿ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಹಾಗೂ ದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಗೃಹ ಸಚಿವ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಉದ್ದೇಶವಿದೆ ಎಂದು ರೋಷನ್ ಬೇಗ್ ಹೇಳಿದರು.

ನಂತರ, ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಮಾತನಾಡಿದ ಅವರು, ಕರ್ನಾಟಕವಲ್ಲ. ಕರ್ನಾಟಕದಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೆ ದೇಶದ ಹಲವು ಭಾಗಗಳಲ್ಲಿ ಮುಸ್ಲಿಮರು ಮತ್ತು ಅಲ್ಪಸಂಖ್ಯಾತರಿಗೆ ತೊಂದರೆಯಾಗಿದೆ. ಅಂತಹ ಅಂಶಗಳನ್ನು ನಿಯಂತ್ರಿಸಲು ನಾವು ಸಂಬಂಧಪಟ್ಟವರನ್ನು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದರು.

RELATED ARTICLES
- Advertisment -
Google search engine

Most Popular