Friday, April 11, 2025
Google search engine

Homeರಾಜ್ಯಪಕ್ಷದ ಹಿತ ಕಾಪಾಡುವುದು ನನ್ನ ಜವಾಬ್ದಾರಿ: ನಿಖಿಲ್ ಕುಮಾರಸ್ವಾಮಿ

ಪಕ್ಷದ ಹಿತ ಕಾಪಾಡುವುದು ನನ್ನ ಜವಾಬ್ದಾರಿ: ನಿಖಿಲ್ ಕುಮಾರಸ್ವಾಮಿ

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಹಿತ ಕಾಪಾಡುವುದು ನನ್ನ ಜವಾಬ್ದಾರಿ. ಹೀಗಾಗೀ ಪಕ್ಷ ಕಟ್ಟಿ ಬೆಳೆಸಿದ ಕಟ್ಟ ಕಡೆಯ ಕಾರ್ಯಕರ್ತನಿಗೂ ರಾಜಕೀಯ, ಸಾಮಾಜಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಅವರಲ್ಲಿ ಒಬ್ಬನಾಗಿ ಕೆಲಸ ಮಾಡುತ್ತಿದ್ದೇನೆ. ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯಧ್ಯಕ್ಷ ಹುದ್ದೆ ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಅವರು, ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರೂ ನಾನು ಪಾಲಿಸಲು ಬದ್ಧ. ನಾನು ಯಾವುದೇ ಹುದ್ದೆಯ ಆಕಾಂಕ್ಷಿ ಅಲ್ಲ. ನಮ್ಮಲ್ಲಿ ಹಿರಿಯ ನಾಯಕರಿದ್ದಾರೆ. ಅವರ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ಪಕ್ಷ ಇದ್ದರೆ ನಿಖಿಲ್ ಕುಮಾರಸ್ವಾಮಿ. ಪಕ್ಷಕ್ಕೆ ಸಾವಿರಾರು ಕಾರ್ಯಕರ್ತರನ್ನು ಹುಟ್ಟು ಹಾಕುವ ಶಕ್ತಿ ಇದೆ. ಹೀಗಾಗೀ ಪಕ್ಷದ ತಿರ್ಮಾನವೇ ಅಂತಿಮ ಎಂದು ಹೇಳಿದರು.

ಮುಂದುವರೆದು ಉಪಚುನಾವಣೆ ಬಳಿಕ ನಾನು ಕೈಕಟ್ಟಿ ಕುಳಿತಿಲ್ಲ. ರೈತರ ನಿಯೋಗದೊಂದಿದೆ ದೆಹಲಿಗೆ ಬಂದಿದ್ದೇನೆ. ತಂಬಾಕು ಬೆಳೆಗಾರರ ಸಮಸ್ಯೆಗಳ ಕೇಂದ್ರ ಮಂತ್ರಿಗಳ ಜೊತೆಗೆ ಚರ್ಚೆ ಮಾಡಿದ್ದೇನೆ. ಇದೇ ಅವಧಿಯಲ್ಲಿ ಗೃಹ ಸಚಿವ ಅಮಿತ್ ಶಾ, ಉಸ್ತುವಾರಿ ರಾಧಮೋಹನ್ ಸಿಂಗ್, ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದೇನೆ. ಮೈತ್ರಿಯನ್ನು ಬಲಪಡಿಸುವ ಬಗ್ಗೆ, ಸ್ಥಳೀಯ ಚುನಾವಣೆಗಳಲ್ಲಿ ಒಟ್ಟಾಗಿ ಹೋಗುವ ಬಗ್ಗೆ ಚರ್ಚಿಸಿದ್ದೇನೆ. ಅಮಿತ್ ಶಾ ಅವರಿಗೆ ರಾಜ್ಯ ಬಿಜೆಪಿ ಬೆಳವಣಿಗೆ ಬಗ್ಗೆ ಗೊತ್ತಿರುವ ಹಿನ್ನೆಲೆ ಆ ಬಗ್ಗೆ ಚರ್ಚೆ ಮಾಡಿಲ್ಲ ಎಂದರು.

RELATED ARTICLES
- Advertisment -
Google search engine

Most Popular