ಮೈಸೂರು: ಬಸ್ ನಿಲ್ದಾಣದಲ್ಲಿ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಲಷ್ಕರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಸಬರ್ಬನ್ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಬಳಿ ಕಳ್ಳತನ ಮಾಡುತ್ತಿದ್ದರು. ಆರೋಪಿಗಳಿಂದ 12 ಲಕ್ಷ ರೂ ಮೌಲ್ಯದ 184 ಗ್ರಾಂ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
2024ರ ಡಿ. 16ರಂದು ಮೈಸೂರು ನಗರದ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಸಬರ್ಬನ್ ಬಸ್ ನಿಲ್ದಾಣದಲ್ಲಿ ತಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟು ಕೊಂಡಿದ್ದ 184 ಗ್ರಾಂ ಚಿನ್ನ ಒಡವೆಗಳು ಕಳ್ಳತನವಾಗಿದ್ದ ಈ ಬಗ್ಗೆ ಪ್ರಕರಣ ದಾಖಲಿಸಿದ್ದರು.
ಪ್ರಕರಣದ ಆರೋಪಿ ಮತ್ತು ಮಾಲು ಪತ್ತೆ ಬಗ್ಗೆ ವಿಶೇಷ ತಂಡವನ್ನು ರಚಿಸಿದ್ದು, ಸದರಿ ತಂಡವು 2024ರ ಡಿ. 31ರಂದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣಕ್ಕೆ ಸಂಬಂಧಪಟ್ಟ 12 ಲಕ್ಷ ರೂ. ಮೌಲ್ಯದ ಒಟ್ಟು 184 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿ ಕೊಂಡಿದ್ದಾರೆ.
ಮೈಸೂರು ನಗರದ ಡಿ.ಸಿ.ಪಿ. ಜಾಹ್ನವಿರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪರವರ ನೇತೃತ್ವದಲ್ಲಿ ಲಷ್ಕರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕೆ ಆರ್ ಪ್ರಸಾದ್, ಎಂ. ರಾಧಾ, ಅನಿಲ್‌ಕುಮಾರ್ ವನ್ನೂರ್ ಹಾಗೂ ಸಿಬ್ಬಂದಿಗಳಾದ ಸುರೇಶ, ರವಿಕುಮಾರ, ಗಿರೀಶ್, ಮಂಜುನಾಥ, ಚೌಡಪ್ಪ ಪಾಸೀಗರ್, ಅಬ್ದುಲ್ ರೆಹಮಾನ್, ಅಶ್ವಿನಿ ಹಳವಾರ ಹಾಗೂ ತಾಂತ್ರಿಕ ವಿಭಾಗದ ಕುಮಾರ್ ರವರುಗಳು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.