ಮೈಸೂರು: ಇಂದು ಮೈಸೂರು ನಗರದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಲಾಯಿತು.
ಮೈಸೂರು ಜಿಲ್ಲಾ ಪಂಚಾಯತ್ ಗಾಂಧಿ ಪ್ರತಿಮೆ ಮುಂಭಾಗದಿಂದ ಕೋಟೆ ಆಂಜನೇಯ ಸ್ವಾಮಿ ಟೆಂಪಲ್ ಮುಂಭಾಗದ ವರೆಗೆ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾಲ್ನಡಿಗೆ ಜಾಥಾವನ್ನು ನಡೆಸಿದರು.

ದೇವಸ್ಥಾನದ ಮುಂಭಾಗ ತೆಂಗಿನಕಾಯಿ ಹೊಡೆಯುವ ಮೂಲಕ ನಾಡಿನಲ್ಲಿ ಆದಷ್ಟು ಬೇಗ ಮಳೆ ಆಗಲಿ ಎಂದು ಪ್ರಾರ್ಥಿಸಿದರು.
ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯದ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.