ಮಂಡ್ಯ: ಮೈಸೂರು ಚಲೋ 5ನೇ ದಿನದ ಪಾದಯಾತ್ರೆ ಆರಂಭಗೊಂಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ನೇತೃತ್ವದಲ್ಲಿ ಮುನ್ನುಗ್ಗುತ್ತಿದೆ.
ನಗರದ ಹೊರ ಹೊಲಯದಲ್ಲಿರುವ ಶಶಿಕಿರಣ ಕನ್ವೆನ್ಷನ್ ಹಾಲ್ ಬಳಿಯಿಂದ ಆರಂಭವಾದ ಪಾದಯಾತ್ರೆ ಇಂದು ತೂಬಿನಕೆರೆ ಕೈಗಾರಿಕಾ ಪ್ರದೇಶವರೆಗೂ ನಡೆಯಲಿದೆ. ಇಂದು 16KM ಸಾಗಲಿರುವ ಜೆಡಿಎಸ್-ಬಿಜೆಪಿ ಪಾದಯಾತ್ರೆ.
ಪಾದಯಾತ್ರೆಯಲ್ಲಿ ಜೆಡಿಎಸ್-ಬಿಜೆಪಿ ಕಾರ್ಯಕರ್ತರು ಹೆಜ್ಜೆ ಹಾಕುತ್ತಿದ್ದಾರೆ. ಕೆಲವೇ ಕ್ಷಣಗಳಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದು, ರಸ್ತೆ ಯುದ್ಧಕ್ಕೂ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.