Monday, April 21, 2025
Google search engine

Homeಸ್ಥಳೀಯಮೈಸೂರು: ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ

ಮೈಸೂರು: ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆ

ಮೈಸೂರು: ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಪ್ರಯುಕ್ತ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಳ ಕಚೇರಿ ವತಿಯಿಂದ ವಿದ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಚಾಲನೆ ನೀಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬಳಕೆ ಹಾಗೂ ಮತದಾನ ಖಾತ್ರಿ ಯಂತ್ರ (ವಿ.ವಿ. ಪ್ಯಾಟ್) ಕಾರ್ಯವೈಖರಿ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ಸಾರ್ವಜನಿಕರಿಗೆ ನಡೆಸಲಾಯಿತು.

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಮಾತನಾಡಿ, ‘ಚುನಾವಣಾ ಪ್ರಕ್ರಿಯೆ ವಿಷಯದಲ್ಲಿ ವಿಶ್ವಾಸ ಮೂಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜಿಲ್ಲೆಯಾದ್ಯಂತ ಈ ಕಾರ್ಯ ನಡೆಯಲಿದೆ. ಮತದಾರರು ಪಾಲ್ಗೊಂಡು ಅಣಕು ಮತದಾನ ಮಾಡಿ, ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಹಾಗೂ ಮತದಾನ ಖಾತ್ರಿ ಮಾಡಿಕೊಳ್ಳುವ ಬಗ್ಗೆ ಖುದ್ದು ಮನವರಿಕೆ ಮಾಡಿಕೊಳ್ಳಬಹುದಾಗಿದೆ ಎಂದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್, ಚುನಾವಣಾ ಶಿರಸ್ತೇದಾರ್ ಸುರೇಶ್ ಹಾಗೂ ಚುನಾವಣಾ ಶಾಖೆಯ ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular