ಮೈಸೂರು: ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್ ೨೨ ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಡಿ.ಕೆ. ಶಿವಕುಮಾರ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.
ಮೈಸೂರು ಜಿಲ್ಲಾಧಿಕಾರಿ ಲಕ್ಷೀಕಾಂತ ರೆಡ್ಡಿ, ಸಿಇಒ ಮುಖೇಶ್ ಕುಮಾರ್, ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್, ಎಸ್.ಪಿ ವಿಷ್ಣುವರ್ಧನ್, ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪಾ ಅವರನ್ನು ಒಳಗೊಂಡ ನಿಯೋಗವು ವಿಧಾನಸೌಧದಲ್ಲಿ ಆಹ್ವಾನ ಪತ್ರಿಕೆ ನೀಡಿ ಸನ್ಮಾನಿಸಿದರು.