ಮೈಸೂರು: ಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನ ಸಿದ್ದಾರ್ಥ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಇಂದಿನಿಂದ ಹೊಸಕಟ್ಟಡದಲ್ಲಿ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸರ್ಕಾರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳನ್ನು ಸಾರ್ವಜನಿಕರು ಸಿದ್ದಾರ್ಧನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳಾದ ಡಾ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.