ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆಯಲ್ಲಿ ರಾಜವೈಭವ ಮರುಕಳಿಸಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರತ್ನಖಚಿತ ಸಿಂಹಾಸನವೇರಿ ೧೦ನೇ ಬಾರಿಗೆ ಖಾಸಗಿ ದರ್ಬಾರ್ ನಡೆಸಿದರು.
ಚಾಮುಂಡಿ ಬೆಟ್ಟದಲ್ಲಿಂದು ಚಾಮುಂಡೇಶ್ವರಿಗೆ ಅಗ್ರಪೂಜೆಯೊಡನೆ ದಸರಾ ಹಬ್ಬಕ್ಕೆ ಚಾಲನೆ ದೊರೆತರೆ, ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್‌ನೊಂದಿಗೆ ನವರಾತ್ರಿ ಆಚರಣೆ ಚಾಲನೆ ಪಡೆದುಕೊಂಡಿತು. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂಸದರಾದ ಬಳಿಕ ಮೊದಲ ಬಾರಿಗೆ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವೇರಿ ದರ್ಬಾರ್ ನಡೆಸಿದರು.
ಈ ಮೂಲಕ ಮೊದಲ ದಿನದ ಅರಮನೆ ಕಾರ್ಯಕ್ರಮ ಮುಕ್ತಾಯ ಗೊಂಡಿತು. ಪ್ರಮೋದಾದೇವಿ ಒಡೆಯರ್ ಮಾರ್ಗದರ್ಶನದಲ್ಲಿ, ಅ.೧೧ರವರೆಗೆ ಖಾಸಗಿ ದರ್ಬಾರ್ ನಡೆಯಲಿದೆ. ೧೨ರಂದು ವಿಜಯಯಾತ್ರೆ ಯದುವೀರ ನಡೆಸಲಿದ್ದಾರೆ.