ದಸರಾ ಆನೆಗಳು ಸೆಪ್ಟೆಂಬರ್ 4ಕ್ಕೆ ಅರಮನೆ ಆವರಣ ಪ್ರವೇಶ, ದಸರಾ ಆಚರಣೆಗಾಗಿ 16 ಉಪ ಸಮಿತಿ ರಚನೆ – ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಕಾರ್ಯಕಾರಿ ಸಮಿತಿ ಸಭೆ ಅಂತ್ಯವಾಗಿದ್ದು, ಸೆಪ್ಟಂಬರ್ 1ಕ್ಕೆ ಗಜಪಯಣ ನಡೆಯಲಿದ್ದು, ದಸರಾ ಆಚರಣೆಗಾಗಿ 16 ಉಪ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆಚರಣೆ ಸಂಬಂಧ ಸಚಿವ ಹೆಚ್.ಸಿ ಮಹದೇವಪ್ಪ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆ ಮುಗಿದ ಬಳಿಕ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ ಹೆಚ್ ಸಿ ಮಹದೇವಪ್ಪ, ದಸರಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚುನಾಯಿತ ಜನಪ್ರತಿನಿಧಿಗಳು ಭಾಗಿಯಾಗಿ ಹಲವು ಸಲಹೆಗಳನ್ನು ಕೊಟ್ಟಿದ್ದಾರೆ.
ಈ ಬಾರಿಯ ದಸರಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಲಾಗುವುದು. ಸೆಪ್ಟೆಂಬರ್ 1ಕ್ಕೆ ಗಜಪಯಣ ಸಮಾರಂಭ ನಡೆಯಲಿದೆ. ದಸರಾ ಆನೆಗಳು ಸೆಪ್ಟೆಂಬರ್ 4ಕ್ಕೆ ಅರಮನೆ ಆವರಣ ಪ್ರವೇಶಿಸಲಿವೆ. ದಸರಾ ಆಚರಣೆಗಾಗಿ 16 ಉಪ ಸಮಿತಿ ರಚಿಸಲಾಗಿದೆ. ಅಗತ್ಯ ಬಿದ್ದರೆ ಮತ್ತೆ ಮೂರು ಸಮಿತಿಗಳನ್ನು ರಚಿಸಲಾಗುತ್ತದೆ. ಈ ಬಾರಿ ಬ್ಯ್ರಾಂಡ್ ಮೈಸೂರು ಸ್ಪರ್ಧೆ ಆಯೋಜಿಸಲಾಗುವುದು. ದಸರಾಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಕಳೆದ ಸಲಕ್ಕಿಂತ ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.