Friday, April 11, 2025
Google search engine

Homeಬ್ರೇಕಿಂಗ್ ನ್ಯೂಸ್ನಾದಬ್ರಹ್ಮ ಹಂಸಲೇಖರಿಂದ ದಸರಾ ಮಹೋತ್ಸವ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ನಾದಬ್ರಹ್ಮ ಹಂಸಲೇಖರಿಂದ ದಸರಾ ಮಹೋತ್ಸವ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಈ ಬಾರಿಯ ದಸರಾ ಮಹೋತ್ಸವವನ್ನು ಖ್ಯಾತ ಸಂಗೀತ ನಿರ್ದೇಶಕ  ನಾದಬ್ರಹ್ಮ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಂಸಲೇಖ  ಈ ಬಾರಿಯ ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸರ್ಕಾರ 100 ದಿನ ಪೂರೈಸಿದ ವಿಚಾರವಾಗಿ ಮಾತನಾಡಿ, ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ.  ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ‌. ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು. ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ.ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ ಎಂದು ಹೇಳಿದರು.

ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ತಿಳಿಸಿದರು.

ನಾಡದೇವತೆ ಚಾಮುಂಡಿ ತಾಯಿ ದರ್ಶನ ಪಡೆದ ಸಿಎಂ, ಡಿಸಿಎಂ

ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿ, ನಾಡದೇವತೆ ಚಾಮುಂಡಿ ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಸಚಿವರಾದ ಮಹದೇವಪ್ಪ,‌ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತಿತರರು ಭಾಗಿಯಾಗಿದ್ದರು.

RELATED ARTICLES
- Advertisment -
Google search engine

Most Popular