Tuesday, October 7, 2025
Google search engine

Homeಸ್ಥಳೀಯಮೈಸೂರು: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಮೈಸೂರು: ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಮೈಸೂರು: ಇಂದು ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮೈಸೂರು ನಗರ ಮತ್ತು ತಾಲ್ಲೂಕು ನಾಯಕ ಜನಾಂಗದ ಸಂಘಗಳ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕಾರ್ಯಕ್ರಮವನ್ನು ಸಚಿವ ಡಾ.ಹೆಚ್.ಸಿ ಮಹಾದೇಪ್ಪರವರು ದೀಪ ಬೆಳಗಿಸಿ, ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಇದೇ ವೇಳೆ ಎಸ್.ಎಸ್. ಎಲ್.ಸಿ ಯಲ್ಲಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಹೆಚ್ಚು ಹೆಸರು ಮಾಡಿದ ಪರಿಶಿಷ್ಟ ವರ್ಗದ ಶಾಲೆಗಳ ಪ್ರಾಧ್ಯಾಪಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ನ ಶಾಸಕರಾದ ಡಾ ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಕೆ. ಶಿವಕುಮಾರ್, ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್. ಯುಕೇಶ್ ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ್. ಎನ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಆಸಿಫ್, ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳಾದ ಎಂ. ಕೆ ಮಲ್ಲೇಶ್, ಶ್ರೀ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಸಿ. ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular