ಮೈಸೂರು: ಆನೆ ತುಳಿತಕ್ಕೆ ವ್ಯಕ್ತಿಯೊಬ್ಬ ಬಲಿಯಾಗಿರುವ ಘಟನೆ ಹುಣಸೂರು ತಾಲೂಕು ವೀರನಹೊಸಹಳ್ಳಿ ಬಳಿ ನಡೆದಿದೆ.
ಆನೆ ತುಳಿತಕ್ಕೆ ಹಾಡಿ ನಿವಾಸಿ ವಸಂತ್(36) ಬಲಿಯಾಗಿದ್ದಾರೆ.
ಮೃತ ವಸಂತ್ ಅವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಸದ್ಯ ಸ್ಥಳಕ್ಕೆ ಹಿರಿಯ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.