Saturday, April 19, 2025
Google search engine

Homeಸ್ಥಳೀಯಮೈಸೂರು: ಚಲಿಸುತ್ತಿದ್ದ ಬ್ಯಾಟರಿ ಚಾಲಿತ ವಾಹನಕ್ಕೆ ಬೆಂಕಿ- ಸವಾರ ಪಾರು

ಮೈಸೂರು: ಚಲಿಸುತ್ತಿದ್ದ ಬ್ಯಾಟರಿ ಚಾಲಿತ ವಾಹನಕ್ಕೆ ಬೆಂಕಿ- ಸವಾರ ಪಾರು

ಮೈಸೂರು: ಚಲಿಸುತ್ತಿದ್ದ ಎಲೆಕ್ಟ್ರಿಕ್​ ಸ್ಕೂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ಮೈಸೂರು ಅರಮನೆ ಬಳಿಯ ಮಾರಮ್ಮನ ದೇವಸ್ಥಾನದ ಎದುರು ಗುರುವಾರ ಸಂಜೆ ನಡೆದಿದೆ.

ಅದೃಷ್ಟವಶಾತ್ ಸವಾರ ಮೈಸೂರಿನ ರಾಮಕೃಷ್ಣನಗರದ ನಿವಾಸಿ ಬಸವರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇವರು ತಮ್ಮ ಸ್ನೇಹಿತರಿಗೆ ಸೇರಿದ ಎಲೆಕ್ಟ್ರಿಕ್ಸ್ ಸ್ಕೂಟರ್‌ ನಲ್ಲಿ ತೆರಳುತ್ತಿದ್ದಾಗ ಸ್ಕೂಟರ್‌ ನ ಹಿಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸಾರ್ವಜನಿಕರು, ಬಸವರಾಜು ಅವರನ್ನು ಎಚ್ಚರಿಸಿದ್ದಾರೆ.

ತಕ್ಷಣ ಬಸವರಾಜು ಕೆಳಗಿಳಿದು, ಅಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಆದರೂ, ಎಲೆಕ್ಟ್ರಿಕ್ಸ್ ಸ್ಕೂಟರ್ ಸಂಪೂರ್ಣ ಭಸ್ಮವಾಗಿದೆ.

ಸ್ಥಳಕ್ಕೆ ನಗರ ಸಂಚಾರ ಉಪ ವಿಭಾಗದ ಎಸಿಪಿ ಪರಶುರಾಮಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular