ಮೈಸೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಮೈಸೂರಿಗೆ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ರಾಷ್ಟ್ರಪತಿಯಾಗಿ ಮೈಸೂರಿಗೆ ಅವರ ಎರಡನೇ ಭೇಟಿ ಆಗಲಿದೆ.
ಮಧ್ಯಾಹ್ನ 3:20ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸಿಎಂ ಸಿದ್ದರಾಮಯ್ಯ ಅವರಿಂದ ಸ್ವಾಗತಿಸಲ್ಪಡಲಿದ್ದಾರೆ. ಅಲ್ಲಿಂದ ನೇರವಾಗಿ ಅವರು ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ 8ಕ್ಕೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ.
ಸೆಪ್ಟೆಂಬರ್ 2ರಂದು ಬೆಳಿಗ್ಗೆ ಅರಮನೆ ವೀಕ್ಷಣೆ ಮತ್ತು ರಾಜವಂಶದ ಆತಿಥ್ಯ ಸ್ವೀಕರಿಸಿ, ನಂತರ ದೆಹಲಿಗೆ ತೆರಳಲಿದ್ದಾರೆ.
ರಾಷ್ಟ್ರಪತಿಗಳ ಭದ್ರತೆ ಹಿನ್ನೆಲೆಯಲ್ಲಿ ಹೋಟೆಲ್ ಸುತ್ತಮುತ್ತ ಭದ್ರತಾ ವ್ಯವಸ್ಥೆ ಜೋರಾಗಿದ್ದು, ರಸ್ತೆಗಳ ದುರಸ್ತಿ ನಡೆಸಲಾಗಿದೆ. ಲಲಿತ್ ಮಹಲ್ ರಸ್ತೆಯ ಅಂಗಡಿಗಳ ತೆರವು ಕಾರ್ಯಾಚರಣೆಯಿಂದ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.