Saturday, April 19, 2025
Google search engine

Homeರಾಜ್ಯಮೈಸೂರು ರೇವ್ ಪಾರ್ಟಿ ವಿಚಾರ: ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ: ಸಿಎಂ ಸಿದ್ಧರಾಮಯ್ಯ

ಮೈಸೂರು ರೇವ್ ಪಾರ್ಟಿ ವಿಚಾರ: ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿ ನಡೆಸಿದಂತ ವಿಚಾರ ಗಮನಕ್ಕೆ ಬಂದಿದೆ. ಈ ಬಗ್ಗೆ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮೈಸೂರಿನಲ್ಲಿ ರೇವ್ ಪಾರ್ಟಿ ಆಯೋಜನೆ ವಿಚಾರವನ್ನು ಮೈಸೂರು ಎಸ್ಪಿಯಿಂದ ಮಾಹಿತಿ ಪಡೆದಿದ್ದೇನೆ. ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ರೇವ್ ಪಾರ್ಟಿ ವಿರುದ್ಧ ಕಾನೂನು ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ ಎಂದರು.

ಅಂದಹಾಗೆ ಮೈಸೂರು ಹೊರ ವಲಯದಲ್ಲಿ ರೇವ್ ಪಾರ್ಟಿಯನ್ನು ನಿನ್ನೆ ಆಯೋಜಿಸಲಾಗಿತ್ತು. ಈ ಖಚಿತ ಮಾಹಿತಿಯ ಮೇರೆಗೆ ಮೈಸೂರು ಹೆಚ್ಚುವರಿ ಎಸ್ಪಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ೧೫೦ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ತಲಾ ೨೦೦೦ದಂತೆ ವಸೂಲಿ ಮಾಡಿ ರೇವ್ ಪಾರ್ಟಿ ಆಯೋಜಿಸಲಾಗಿದೆ ಎನ್ನಲಾಗಿತ್ತು. ಆದರೇ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸರಬರಾಜು, ಸೇವನೆಯ ಬಗ್ಗೆ ಮಾದರಿ ಸಂಗ್ರಹಿಸಿದ್ದು, ವರದಿಯ ಬಳಿಕ ತಿಳಿಯಲಿದೆ.

RELATED ARTICLES
- Advertisment -
Google search engine

Most Popular