Friday, April 11, 2025
Google search engine

Homeರಾಜ್ಯಮೈಸೂರು: ತಾಯಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ದರಾಮಯ್ಯ ಸೂಚನೆ

ಮೈಸೂರು: ತಾಯಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಈ ಸಂಬಂಧಿಸಿದಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ

“ಚಾಮುಂಡೇಶ್ವರಿ ದೇವಿ ಕನ್ನಡ ನಾಡಿನ ಅಸ್ಮಿತೆ. ಕನ್ನಡಿಗರ ಧಾರ್ಮಿಕ ಪ್ರತಿನಿಧಿ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ, ದೇವಸ್ಥಾನಕ್ಕೆ, ದೇವಿಗೆ ಪೌರಾಣಿಕ, ಐತಿಹಾಸಿಕ ಹಿನ್ನೆಲೆ ಇದೆ. ಅದಕ್ಕಾಗಿಯೇ ಮೈಸೂರಿನಲ್ಲಿ ನಡೆಯುವ ದಸರಾವನ್ನು ನಾಡ ಹಬ್ಬ ಎಂದು ಕರೆಯಲಾಗುತ್ತದೆ. ಈ ನಾಡದೇವಿಯನ್ನು ಚಿನ್ನದ ರಥದಲ್ಲಿ ಕೂರಿಸಿ ಮೆರೆಸಬೇಕು ಎಂಬುದು ಭಕ್ತರ ಬೇಡಿಕೆಯಾಗಿತ್ತು.ಈ ಹಿನ್ನೆಲೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ನೀಡಿದ್ದರು.

ಈ ಕುರಿತಾಗಿ ದಿನೇಶ್ ಗೂಳಿಗೌಡ ಮಾತನಾಡಿ, ಚಿನ್ನದ ರಥ ನಿರ್ಮಾಣಕ್ಕೆ ಬೇಕಾದ ಅಂದಾಜು ವೆಚ್ಚದ ಪ್ರಸ್ತಾವನೆಯನ್ನು ಸರ್ಕಾರ ತಯಾರಿಸಬೇಕು. ದೇವಸ್ಥಾನದಲ್ಲಿ ಈ ಉದ್ದೇಶಕ್ಕೋಸ್ಕರ ಪ್ರತ್ಯೇಕ ಹುಂಡಿಯೊಂದನ್ನು ಇಡಬೇಕು. ಭಕ್ತರು ಅದರಲ್ಲಿ ಹಣ ಹಾಗೂ ಚಿನ್ನವನ್ನು ಹಾಕಲು ಅವಕಾಶ ನೀಡಬೇಕು. ಸಂಗ್ರಹಿತ ಕಾಣಿಕೆ ಹಣಕ್ಕಿಂತ ಹೆಚ್ಚಿಗೆ ಬೇಕಾಗುವ ಹಣವನ್ನು ಸರ್ಕಾರ ಭರಿಸಬೇಕು ಎಂದು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular