Tuesday, April 22, 2025
Google search engine

Homeರಾಜ್ಯಸುದ್ದಿಜಾಲನಾಗರಾಜಪ್ಪ ಅವಧಿಯಲ್ಲಿ ಮೈಶುಗರ್: ಕಾರ್ಖಾನೆಗೆ ೧೨೧ ಕೋಟಿ ರೂ. ನಷ್ಟ

ನಾಗರಾಜಪ್ಪ ಅವಧಿಯಲ್ಲಿ ಮೈಶುಗರ್: ಕಾರ್ಖಾನೆಗೆ ೧೨೧ ಕೋಟಿ ರೂ. ನಷ್ಟ

ಮಂಡ್ಯ : ೨೦೦೮-೦೯ ಮತ್ತು ೨೦೧೧-೧೨ರ ಅವಧಿಯಲ್ಲಿ ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಗೆ ಅಧ್ಯಕ್ಷರಾಗಿದ್ದ ನಾಗರಾಜಪ್ಪ ಅಧಿಕಾರವಧಿಯಲ್ಲಿ ಕಾರ್ಖಾನೆಗೆ ೧೨೧ ಕೋಟಿ ರೂ. ನಷ್ಟವುಂಟಾಗಿದೆ ಎಂಬುದು ಉಪ ಲೋಕಾಯುಕ್ತರ ತನಿಖೆಯಲ್ಲಿ ಸಾಬೀತಾಗಿದೆ.
ಉಪ ಲೋಕಾಯುಕ್ತರು ನೀಡಿರುವ ವರದಿಯ ಪ್ರಕಾರ, ನಾಗರಾಜಪ್ಪ ಮೇಲಿನ ಆರೋಪಗಳು ಸಾಬೀತಾಗಿವೆ. ಕಾರ್ಖಾನೆಗೆ ಉಂಟಾಗಿರುವ ನಷ್ಟವನ್ನು ಮೈಸೂರು ಶುಗರ್ ಕಂಪನಿಗೆ ಮರುಪಾವತಿಸಿಕೊಳ್ಳುವ ಸಂಬಂಧ ನಾಗರಾಜಪ್ಪ ವಿರುದ್ಧ ನ್ಯಾಯಾಲಯದಲ್ಲಿ ಸಿವಿಲ್ ದಾವೆಯನ್ನು ಹೂಡಲು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಕಾರ್ಯದರ್ಶಿ ಅನುಮೋದನೆ ನೀಡಿದ್ದಾರೆ.

ನಾಗರಾಜಪ್ಪ ಅವರ ಹೆಸರಿನಲ್ಲಿ ಹಾಗೂ ಅವರ ಕುಟುಂಬದ ಸದಸ್ಯರ ಹೆಸರಿನಲ್ಲಿರುವ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸ್ಥಿರಾಸ್ತಿ ಮತ್ತು
ಚರಾಸ್ತಿಗಳ ಮಾಹಿತಿಯನ್ನು ಕ್ರೋಡೀಕರಿಸಬೇಕಾಗಿದೆ. ಹೀಗಾಗಿ, ನಾಗರಾಜಪ್ಪ ಅವರಿಗೆ ಸಂಬಂಧಿಸಿದ ಕೃಷಿ ಜಮೀನು ಕೃಷಿಯೇತರ ಆಸ್ತಿ
ನಿವೇಶನ, ವಾಹನಗಳು, ಬ್ಯಾಂಕಿನಲ್ಲಿರುವ ನಗದು, ಠೇವಣಿಗಳು, ಷೇರು ಹಾಗೂ ಇತ್ಯಾದಿ ಮಾಹಿತಿಗಳನ್ನು ದಾಖಲೆಗಳೊಂದಿಗೆ ನೀಡುವಂತೆ ಮೈಷುಗರ್ ವ್ಯವಸ್ಥಾಪಕ ನಿರ್ದೇಶಕ ಎಂ.ಆರ್.ರವಿಕುಮಾರ್ ಅವರು ಕಳೆದ ಡಿ.೩೧ರಂದು ಮಂಡ್ಯ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.

RELATED ARTICLES
- Advertisment -
Google search engine

Most Popular