Thursday, July 24, 2025
Google search engine

Homeರಾಜ್ಯಸುದ್ದಿಜಾಲಜುಲೈ 26ರಂದು ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ನಾಡಪ್ರಭು ಕೆಂಪೇಗೌಡ ಸಂಸ್ಮರಣೋತ್ಸವ, ಪ್ರಶಸ್ತಿ ಪ್ರದಾನ ಹಾಗೂ...

ಜುಲೈ 26ರಂದು ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ನಾಡಪ್ರಭು ಕೆಂಪೇಗೌಡ ಸಂಸ್ಮರಣೋತ್ಸವ, ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ವರದಿ: ರವಿಚಂದ್ರ ಬೂದಿತಿಟ್ಟು

ಪಿರಿಯಾಪಟ್ಟಣ : ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ನಾಡಪ್ರಭು ಕೆಂಪೇಗೌಡರ ಸಂಸ್ಮರಣೋತ್ಸವ ಮತ್ತು ಪ್ರಗತಿಪರ ರೈತರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದರು.

ಪಟ್ಟಣದ ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಒಕ್ಕಲಿಗ ಯುವ ಬ್ರಿಗೇಡ್ ಪ್ರತಿಯೊಬ್ಬರಿಗೂ ಅನ್ನ, ಅಕ್ಷರ ಮತ್ತು ಅವಕಾಶ ಕಲ್ಪಿಸುವ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ರೈತರಿಗೆ, ಯುವ ಜನತೆಗೆ ಮತ್ತು ಮಹಿಳೆಯರಿಗೆ ಬೆನ್ನೆಲುಬಾಗಿ ನಿಂತಿದೆ. ಸಾಕಷ್ಟು ಶಾಲೆಗಳನ್ನು ದತ್ತು ಪಡೆದು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸ ನೀಡಿ ಉನ್ನತ ಅಧಿಕಾರಿಗಳಾಗಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಇದಕ್ಕಾಗಿ ಸ್ಪರ್ಧಾತ್ಮಕ ತರಬೇತಿ ಕೂಡ ನೀಡುತ್ತಿದ್ದೇವೆ. ಈ ಕಾರಣಕ್ಕಾಗಿ ರಾಜ್ಯದಾದ್ಯಂತ ವಿವಿಧ ಭಾಗಗಳಲ್ಲಿ ಉದ್ಯೋಗ ಮೇಳ, ಶಿಕ್ಷಣ ಮೇಳ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನೀಡಿ ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಇದೇ ಜುಲೈ 26ರಂದು ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ನಾಡಪ್ರಭು ಕೆಂಪೇಗೌಡರ ಸಂಸ್ಮರನೋತ್ಸವ ಮತ್ತು ಪ್ರಗತಿಪರ ರೈತರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರಧಾನ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಮತ್ತು ತುಮಕೂರಿನ ಕುಂಚಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ಹನುಮಂತನಾಥ ಮಹಾ ಸ್ವಾಮೀಜಿ ರವರುಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಉದ್ಘಾಟಿಸಲಿದ್ದಾರೆ.

ಇದರ ಅಧ್ಯಕ್ಷತೆಯನ್ನು ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ. ಎಸ್‌.ವಿ. ಸುರೇಶ್ ವಹಿಸಲಿದ್ದಾರೆ ಹಾಗೂ ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ. ಲಕ್ಷ್ಮಿ ಅಶ್ವಿನ್ ಗೌಡ, ವಿಜಯವಾಣಿ ಬ್ಯುರೋ ಹೆಡ್ ಎಂ.ಆರ್. ಸತ್ಯನಾರಾಯಣ, ಕೆ ಎನ್ ಸಿ ಇಂಟರ್ನ್ಯಾಷನಲ್ ಗ್ಲೋಬಲ್ ಸ್ಕೂಲ್ ನ ಚೇರ್ಮನ್ ಡಾ. ಕೆ.ಎನ್. ಚಂದ್ರಶೇಖರ್, ಸ್ಮಾರ್ಟ್ ಕ್ವಿಕ್ ವ್ಯವಸ್ಥಾಪಕ ನಿರ್ದೇಶಕ ದೀಪು ಗೌಡ, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಡಾ. ಬಿ. ಸಿ. ನವೀನ್, ಮೈಸೂರು ವಿಶ್ವ ವಿದ್ಯಾ ನಿಲಯದ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥರಾದ ಡಾ. ನವಿತಾ ತಿಮ್ಮಯ್ಯ, ವೈದ್ಯಕೀಯ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ. ಸೋಮಶೇಖರ್ ರವರು ಭಾಗವಹಿಸಲಿದ್ದಾರೆ.

ಆದ್ದರಿಂದ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಯಶಸ್ವಿಗಳಿಸಿಕೊಡಬೇಕು ಎಂದು ಮನವಿ ಮಾಡಿದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ನಾಗಣ್ಣ ಗೌಡ, ಮುಖಂಡರಾದ ಮಲ್ಲೇಶ್, ಮಾದೇಗೌಡ, ಹನುಮಂತ, ರಾಜೇಗೌಡ ಹಾಜರಿದ್ದರು.

RELATED ARTICLES
- Advertisment -
Google search engine

Most Popular