ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಜು.26 ರಂದು ಪಿರಿಯಾಪಟ್ಟಣದಲ್ಲಿ ನಾಡಪ್ರಭು ಕೆಂಪೇಗೌಡರ ಸಂಸ್ಮರಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದರು.

ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಜು.26 ರ ಶನಿವಾರ ಬೆಳಗ್ಗೆ 11.30 ಗಂಟೆಗೆ ಪಟ್ಟಣದ ಬಸವೇಶ್ವರ ವೃತ್ತ ಬಳಿ ಇರುವ
ಡಿ.ದೇವರಾಜ್ ಅರಸು ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಪ್ರಗತಿಪರ ರೈತರಿಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರಿನ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಮತ್ತು ತುಮಕೂರಿನ ಕುಂಚಟಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ಹನುಮಂತನಾಥ ಮಹಾ ಸ್ವಾಮೀಜಿ ರವರು ದಿವ್ಯ ಸಾನಿಧ್ಯ ವಹಿಸಲಿದ್ದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಉದ್ಘಾಟಿಸಲಿದ್ದಾರೆ, ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಎಸ್.ವಿ ಸುರೇಶ್ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಡಾ.ಲಕ್ಷ್ಮಿ ಅಶ್ವಿನ್ ಗೌಡ, ವಿಜಯವಾಣಿ ಪತ್ರಿಕೆ ಮೈಸೂರು ವಿಭಾಗ ಮುಖ್ಯಸ್ಥರಾದ ಎಂ.ಆರ್ ಸತ್ಯನಾರಾಯಣ್, ಕೆಎನ್ ಸಿ ಇಂಟರ್ ನ್ಯಾಷನಲ್ ಗ್ಲೋಬಲ್ ಸ್ಕೂಲ್ ಮುಖ್ಯಸ್ಥ ಡಾ.ಕೆ.ಎನ್ ಚಂದ್ರಶೇಖರ್, ಸ್ಮಾರ್ಟ್ ಕ್ವಿಕ್ ವ್ಯವಸ್ಥಾಪಕ ನಿರ್ದೇಶಕ ದೀಪುಗೌಡ, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಬಿ.ಸಿ ನವೀನ್, ಮೈಸೂರು ವಿಶ್ವ ವಿದ್ಯಾನಿಲಯದ ಅರ್ಥಶಾಸ್ತ್ರ ಮತ್ತು ಸಹಕಾರ ವಿಭಾಗದ ಮುಖ್ಯಸ್ಥರಾದ ಡಾ.ನವಿತಾ ತಿಮ್ಮಯ್ಯ, ವೈದ್ಯಕೀಯ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಡಾ. ಸೋಮಶೇಖರ್, ಬಿಜೆಪಿ ತಾಲ್ಲೂಕು ಅಧ್ಯಕ್ಷ ಕೊಪ್ಪ ರಾಜೇಂದ್ರ, ಮೈಸೂರಿನ ಐಕಾನಿಕ್ ಹಾಸ್ಪಿಟಾಲಿಟಿ ವ್ಯವಸ್ಥಾಪಕ ನಿರ್ದೇಶಕ ಭರತ್ ದೇವರಾಜಪ್ಪ, ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ ಪ್ರಸನ್ನ, ಉದ್ಯಮಿ ರಾಜು ಶಿವರಾಜೇಗೌಡ ರವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಒಕ್ಕಲಿಗ ಯುವ ಬ್ರಿಗೇಡ್ ಪ್ರತಿಯೊಬ್ಬರಿಗೂ ಅನ್ನ ಅಕ್ಷರ ಮತ್ತು ಅವಕಾಶ ಕಲ್ಪಿಸುವ ಅನೇಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ರೈತರಿಗೆ ಯುವ ಜನತೆಗೆ ಮತ್ತು ಮಹಿಳೆಯರಿಗೆ ಬೆನ್ನೆಲುಬಾಗಿ ಸಾಕಷ್ಟು ಶಾಲೆಗಳನ್ನು ದತ್ತು ಪಡೆದು ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸ ನೀಡಿ ಉನ್ನತ ಅಧಿಕಾರಿಗಳಾಗಿಸುವ ನಿಟ್ಟಿನಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದ್ದೇವೆ ಇದಕ್ಕಾಗಿ ಸ್ಪರ್ಧಾತ್ಮಕ ತರಬೇತಿ ಕೂಡ ನೀಡುತ್ತಿದ್ದೇವೆ ಈ ಕಾರಣಕ್ಕಾಗಿ ರಾಜ್ಯದಾದ್ಯಂತ ವಿವಿಧ ಭಾಗಗಳಲ್ಲಿ ಉದ್ಯೋಗ ಮೇಳ ಶಿಕ್ಷಣ ಮೇಳ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನೀಡಿ ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಉಪಾಧ್ಯಕ್ಷ ನಾಗಣ್ಣಗೌಡ, ಮುಖಂಡರಾದ ಬೆಟ್ಟದಪುರ ನಮೋ ಮಲ್ಲೇಶ್, ಮಾದೇಗೌಡ, ಹನುಮಂತ, ರಾಜೇಗೌಡ ಇದ್ದರು.