ಹುಣಸೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಗಣೇಶ್ ಗೌಡ ಕೆ. ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಗರದ ಆದಿಚುಂಚನಗಿರಿ ಸಮುದಾಯಭವನದಲ್ಲಿ ದಿನಾಂಕ 09.08.2225ರ ಶನಿವಾರ ಬೆಳಿಗ್ಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದಿವ್ಯಸಾನಿಧ್ಯವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದ ನಾಥ ಸ್ವಾಮಿ ವಹಿಸಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆ ಶಾಸಕ ಜಿ.ಡಿ ಹರೀಶ್ ಗೌಡ ನೆರವೇಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ,ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಜಿ ಸಂಸದ ಪ್ರತಾಪ್ ಸಿಂಹ, ಪ್ರಧಾನ ಭಾಷಣಕಾರರಾಗಿ ವಿಶ್ರಾಂತ ಪ್ರಾಂಶುಪಾಲ ಹೆಚ್.ಆರ್.ಸಿದ್ದೇಗೌಡ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೆ.ಗಣೇಶ್ ಗೌಡ ವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಯುಪಿಎಸ್ಸಿ ಯಲ್ಲಿ ಪಾಸಾಗಿರುವ ಶ್ರೇಯಸ್ ಅವರನ್ನು ಗೌರವಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಸ್ ಯೋಗಾನಂದ್ ಕುಮಾರ್ ತಿಳಿಸಿದ್ದಾರೆ.