Friday, April 18, 2025
Google search engine

Homeರಾಜ್ಯಇಂದಿನಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ : ಕಾರ್ಯಕ್ರಮಗಳ ವಿವರ

ಇಂದಿನಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ : ಕಾರ್ಯಕ್ರಮಗಳ ವಿವರ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ೨೦೨೪ ಇಂದು ಬೆಳಗ್ಗೆ ೯.೧೫ರಿಂದ ೯.೪೦ ರೊಳಗಿನ ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಡಾ.ಹೆಚ್.ಸಿ ಮಹದೇವಪ್ಪ, ಕೆ. ವೆಂಕಟೇಶ್, ಶಿವರಾಜ್ ತಂಗಡಗಿ, ಹೆಚ್.ಕೆ.ಪಾಟೀಲ್, ರಾಮಲಿಂಗ ರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು. ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಿದರು.

ಇಂದು ಗುರುವಾರ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. ೧೧ ವೇದಿಕೆಗಳಲ್ಲಿ ೫೦೮ ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ ೫ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ.

ಮೊದಲ ದಿನ ದಸರಾದ ಕಾರ್ಯಕ್ರಮಗಳ ವಿವರ:

ದಸರಾ ಚಲನಚಿತ್ರೋತ್ಸವ ಉದ್ಘಾಟನೆ: ದಸರಾ ನಿಮಿತ್ತ ಇಂದು ಬೆಳಗ್ಗೆ ೧೧:೩೦ ಗಂಟೆಗೆ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಭವನದಲ್ಲಿ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ದಸರಾ ಆಹಾರ ಮೇಳ ಉದ್ಘಾಟನೆ: ಮಧ್ಯಾಹ್ನ ೧೧:೩೦ ಗಂಟೆಗೆ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಾಹರಗಳ ಸಚಿವ ಕೆ.ಎಚ್. ಮುನಿಯಪ್ಪ ಉದ್ಘಾಟಿಸಲಿದ್ದಾರೆ

ಫಲಪುಷ್ಪ ಪ್ರದರ್ಶನ ಉದ್ಘಾಟನೆ: ಮಧ್ಯಾಹ್ನ ೧೨:೩೦ ಗಂಟೆಗೆ ನಗರದ ಕುಪ್ಪಣ್ಣ ಪಾರ್ಕ್ (ನಿಶಾದ್ ಬಾಗ್) ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೂಡ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ದಸರಾ ಕುಸ್ತಿ ಉದ್ಘಾಟನೆ: ಸಂಜೆ ೦೪ ಗಂಟೆಗೆನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅವರಣದಲ್ಲಿನ ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ದಸರಾ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.

ದಸರಾ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ ಉದ್ಘಾಟನೆ: ಸಂಜೆ ೪ ಗಂಟೆಗೆ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜಿನಲ್ಲಿ ರಾಜ್ಯಮಟ್ಟದ ಶಿಲ್ಪಕಲೆ ಮತ್ತು ಚಿತ್ರಕಲಾ ಶಿಬಿರ?ದಲ್ಲಿ ರಚಿಸಲಾದ ಕಲಾ ಕೃತಿಗಳ ಪ್ರದರ್ಶನ, ಲಲಿತ ಕಲೆ, ಕರಕುಶಲ ಕಲೆಗಳ ಕಲಾಕೃತಿ ಪ್ರದರ್ಶನ ಮತ್ತು ರಾಷ್ಟ್ರಮಟ್ಟದ ಕರಕುಶಲ ಕಲೆಗಳ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

ದಸರಾ ಸಿಎಂ ಕಪ್ ಕ್ರೀಡಾಕೂಟಕ್ಕೆ ಚಾಲನೆ: ಸಂಜೆ ೪:೩೦ ಗಂಟೆಗೆ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಆಯೋಜಿಸಲಾಗಿದ್ದು, ಈ ಕಾರ್ಯಕ್ರಮವನ್ನು ಸಿಎಂ ಉದ್ಘಾಟಿಸಲಿದ್ದಾರೆ.

ದಸರಾ ಪುಸ್ತಕ ಮೇಳ ಉದ್ಘಾಟನೆ: ಸಂಜೆ ೫ ಗಂಟೆಗೆ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಪುಸ್ತಕ ಮೇಳ ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಉದ್ಘಾಟಿಸಲಿದ್ದಾರೆ.

RELATED ARTICLES
- Advertisment -
Google search engine

Most Popular