ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 150 ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್ ಎಸೆದು ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ವರದಿಯಾಗಿದೆ. ಸೆಪ್ಟಂಬರ್ ೧೪ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಗಲಾಟೆ ಸಂಬಂಧ ಪೊಲೀಸರು ನಿನ್ನೆ ರಾತ್ರಿಯೇ ೨೦ ಮಂದಿಯನ್ನು ವಶಕ್ಕೆ ಪಡೆದಿದ್ದು, ಬಳಿಕ ಅನ್ಯಕೋಮಿನ ೩೨ ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.