Friday, April 18, 2025
Google search engine

Homeಅಪರಾಧನಾಗಮಂಗಲ ಕೋಮುಗಲಭೆ ಪ್ರಕರಣ: ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು

ನಾಗಮಂಗಲ ಕೋಮುಗಲಭೆ ಪ್ರಕರಣ: ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ಮಂಜೂರು

ಮಂಡ್ಯ: ನಾಗಮಂಗಲ ‌ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ನ್ಯಾಯಾಂಗ ಬಂಧನದಲ್ಲಿದ್ದಎರಡೂ ಕೋಮಿನ ಒಟ್ಟು 55 ಆರೋಪಿಗಳಿಗೆ ಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ತಲಾ ಒಂದು ಲಕ್ಷ‌ ರೂ. ಮೌಲ್ಯದ ಬಾಂಡ್, ಪ್ರತೀ ಭಾನುವಾರ ಠಾಣೆಗೆ ತೆರಳಿ ಸಹಿ ಹಾಕಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಅಪರಾಧಿ ‌ಕೃತ್ಯದಲ್ಲಿ ಭಾಗಿಯಾಗದಂತೆ ಕೋರ್ಟ್‌ ಆರೋಪಿಗಳಿಗೆ ಷರತ್ತು ವಿಧಿಸಿದೆ.

ಶನಿವಾರ ಮತ್ತು ಭಾನುವಾರ ರಜೆ ಇರುವ ಕಾರಣ ಸೋಮವಾರ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಸೆ.11ರಂದು ಆರೋಪಿಗಳ ಬಂಧನವಾಗಿತ್ತು. ಸೆ.12 ರಿಂದ ಆರೋಪಿಗಳು ಮಂಡ್ಯ ಕಾರಾಗೃಹದಲ್ಲಿದ್ದಾರೆ.

RELATED ARTICLES
- Advertisment -
Google search engine

Most Popular