ನಾಗಮಂಗಲ: ನಿನ್ನೆ ಗಣೇಶನ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಅಹಿತಕರ ಘಟನೆಯ ಬಗ್ಗೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದೊಂದಿಗೆ ಚರ್ಚಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಘಟನೆಯ ಸಂದರ್ಭದಲ್ಲಿ ಕೆಲವು ಅಂಗಡಿ ಮುಂಗಟ್ಟುಗಳಿಗೆ ಹಾನಿಯಾಗಿದ್ದು ಅವನ್ನು ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಈ ಪ್ರಕರಣದ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರೊಂದಿಗೆ ಚರ್ಚಿಸಿದ್ದೇನೆ. ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಮ್ಮ ನಾಗಮಂಗಲ ಶಾಂತಿ ಸೌಹಾರ್ದತೆಯ ತಾಣ. ಇಲ್ಲಿ ಯಾವುದೇ ಅನುಚಿತ ಘಟನೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.