Monday, April 21, 2025
Google search engine

Homeರಾಜ್ಯನಾಗಮಂಗಲ ಗಲಾಟೆ: ತನಿಖೆ ಬಳಿಕ ಕ್ರಮ: ಸಚಿವ ಪರಮೇಶ್ವರ್

ನಾಗಮಂಗಲ ಗಲಾಟೆ: ತನಿಖೆ ಬಳಿಕ ಕ್ರಮ: ಸಚಿವ ಪರಮೇಶ್ವರ್

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

ಇಂದು ಮಂಗಳವಾರ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಹಿತಕರ ಘಟನೆಯಲ್ಲಿ ಯಾರ್ಯಾರು ಭಾಗಿ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ ಎಂದರು. ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ದೂರು ದಾಖಲಾದ ನಂತರ ಬಂಧನವಾಗಿದೆ. ಆದರೆ ಯಾದಗಿರಿ ಶಾಸಕರ ವಿರುದ್ದ ದೂರಿಗೂ ಇದಕ್ಕೂ ವ್ಯತ್ಯಾಸ ವಿದೆ ಎಂದರು.

RELATED ARTICLES
- Advertisment -
Google search engine

Most Popular